ಎನ್‌ಕೌಂಟರ್‌ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಯೋಗಿ ಸರ್ಕಾರ

ಲಖನೌ : ನೈಜ ಆರೋಪಿಗಳನ್ನು ಹಿಡಿಯುವಲ್ಲಿ ವಿಫಲವಾಗಿರುವ ರಾಜ್ಯ ಪೊಲೀಸರು ಅದನ್ನು ಮರೆಮಾಚಲು ನಕಲಿ ಎನ್‌ಕೌಂಟರ್‌ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತರಿಂದ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿಗಳ ಅನ್ವಯ ಎನ್‌ಕೌಂಟರ್ ಸ್ಥಳದ ವಿಡಿಯೊ ಮತ್ತು ಮರಣೋತ್ತರ ಪರೀಕ್ಷೆ ಕಡ್ಡಾಯವಾಗಿದೆ. ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ … Continue reading ಎನ್‌ಕೌಂಟರ್‌ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಯೋಗಿ ಸರ್ಕಾರ