ಬೀನ್ಸ್ ಕಬ್ಬಿಣಾಂಶ ಒದಗಿಸುವ ಉತ್ತಮ ಮೂಲವಾಗಿದೆ. ಕಬ್ಬಿಣದ ಕೊರತೆಯು ರಕ್ತಹೀನತೆಗೆ ಮುಖ್ಯ ಕಾರಣವಾಗಿರುತ್ತದೆ. ಸಾಕಷ್ಟು ಕಬ್ಬಿಣಾಂಶ ಇಲ್ಲದಿದ್ದರೆ, ದೇಹವು ಆಕ್ಸಿಜನ್ ವಾಹಕ ಕೆಂಪು ರಕ್ತ ಕಣಗಳನ್ನು ಉತ್ಪತ್ತಿ ಮಾಡಲು ಸಾಧ್ಯವಿಲ್ಲ, ಇದು ಹಿಮೋಗ್ಲೋಬಿನ್ ಕೊರತೆಗೆ ಕಾರಣವಾಗುತ್ತದೆ. ಕಬ್ಬಿಣಾಂಶವು ಆಯಾಸದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ಶಕ್ತಿಯನ್ನು ಒದಗಿಸುತ್ತದೆ.