ಬೆಂಗಳೂರು: ಗೃಹ ಸಚಿವ ಅಮಿತ್ ಶಾ (Amit Shah) ಲೋಕಸಭಾ ಚುನಾವಣೆಯ (lok sabha election) ಹಿನ್ನೆಲೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಶಾ ಅವರು ವಿಶೇಷ ವಿಮಾನದ ಮೂಲಕ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದು,ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ (BY Vijayendra) ಸ್ವಾಗತಿಸಿದರು. ಇದನ್ನೂ ಓದಿ: ಕೊನೆಗೂ ಕೇಂದ್ರದಿoದ ಕಾಂಗ್ರೆಸ್‌ಗೆ ಬಿಗ್ ರಿಲೀಫ್! ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ
ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೊಡಿರುವ ಅಮಿತ್ ಶಾ ಚುನಾವಣೆ ಪ್ರಯುಕ್ತ ಪ್ರಚಾರ ಕಾರ್ಯಗಳ ಸಭೆಗಳಲ್ಲಿ ಭಾಹಿಯಾಗಲಿದ್ದಾರೆ. ಇದನ್ನೂ ಓದಿ: ಆರ್ಥಿಕ ವರ್ಷದ ಮೊದಲ ದಿನವೇ 6 ಬದಲಾವಣೆಗಳ ಜಾರಿ- ಯಾವ ಯಾವ ಬದಲಾವಣೆ
ಸಂಜೆ ರೋಡ್ ಶೋ:
ಇಂದು ಸಂಜೆ 5:50ಕ್ಕೆ ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆಲಿಪ್ಯಾಡ್‌ಗೆ ಬಂದಿಳಿಯಲಿರುವ ಅಮಿತ್ ಶಾ ರಸ್ತೆಯ ಮೂಲಕ ಚಿಕ್ಕಮಳೂರು ಗ್ರಾಮಕ್ಕೆ ಆಗಮಿಸಲಿದ್ದಾರೆ. ಚಿಕ್ಕಮಗಳೂರು ಗ್ರಾಮದಿಂದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ಆರಂಭಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಪರ ಸುಮಾರು ಒಂದೂವರೆ ಕಿ.ಮೀ ದೂರ ಮೆರವಣಿಗೆ ನಡೆಸಿ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟನೆ- ನಟ ದರ್ಶನ್ ಹಾಜರು

