ಬೆಂಗಳೂರು: ಎರಡು ಕಾರುಗಳಲ್ಲಿದ್ದ ಕಂತೆ ಕಂತೆ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಪ್ರಕರಣ ಜಯನಗರದಲ್ಲಿ ನಡೆದಿದೆ.
ಅಧಿಕಾರಿಗಳು ಬರುತ್ತಿದ್ದಂತೆ ಕಾರಿನಲ್ಲಿದ್ದ ಐವರು, ಚಿಲದಲ್ಲಿರುವುದು ಮಾವಿನ ಹಣ್ಣು ಎಂದಿದ್ದಾರೆ. ನಂತರ ಪರಿಶೀಲನೆ ಮುಂದಾದಾಗ ಒಂದು ಕಾರಿನಲ್ಲಿದ್ದ ಐವರು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು
ಬೆಳಗ್ಗೆ 9 ಗಂಟೆಯಿಂದ ಫೋಲೋ, ಬೆಂಜ್ ಮತ್ತು ಫಾರ್ಚೂನರ್ ಕಾರುಗಳು ಬಂದು ನಿಂತಿದ್ದವು. ಫೋಲೋ ಕಾರಿನಿಂದ ಬೈಕ್‌ಗೆ ಹಣ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದಾರೆ.ಇದನ್ನೂ ಓದಿ: 70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಕೂಡಲೇ ಫರ‍್ಚೂನರ್ ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಸದ್ಯ ಎರಡು ಕಾರು ಮಾತ್ರ ಉಳಿದಿವೆ. ಒಂದು ಬೈಕ್ ಹಾಗೂ ಎರಡು ಕಾರುಗಳಲ್ಲಿ ಮೂರು ಬ್ಯಾಗ್‍ನಲ್ಲಿ ಹಣ ಸಿಕ್ಕಿದೆ ಎಂದು ಎಂಸಿಸಿ ನೋಡಲ್ ಆಫೀಸರ್ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್

ಅಧಿಕಾರಿಗಳು ಬೆಂಜ್ ಕಾರಿನ ಗ್ಲಾಸ್ ಒಡೆದು ಹಣ ಇರುವ ಬ್ಯಾಗ್‍ನ್ನು ಹೊರಗೆ ತೆಗೆದಿದ್ದು, ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ವಶಕ್ಕೆ ಪಡೆದಿದ್ದಾರೆ. ಕಾರಿನ ಒಳಗಡೆ ಒಂದು ಮೊಬೈಲ್ ಕೂಡ ಪತ್ತೆಯಾಗಿದೆ. ಇದೀಗ ಎರಡು ಕೌಂಟಿಂಗ್ ಮಷಿನ್‍ಗಳನ್ನು ತರಿಸಿಕೊಂಡು ಅಧಿಕಾರಿಗಳು ಹಣ ಎಣಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಜೈಲಿನ ಅನುಭವದ ಬಗ್ಗೆ ಹೇಳಿಕೊಂಡ ಸೋನು ಶ್ರೀನಿವಾಸ ಗೌಡ
ಜಯನಗರ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶೀ ನಾಗರಾಜ್ ಮತ್ತು ಮಾಜಿ ಕರ‍್ಪೋರೇಟರ್ ನಾಗರಾಜ್ ಭೇಟಿ ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ : ಇಬ್ಬರು ಬಿಜೆಪಿ ಕಾರ್ಯಕರ್ತರು ಸಾವು

