ಮಂಡ್ಯ: ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸುವ ಜೊತೆಗೆ ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ .

ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಪುಟ್ಟರಾಜು ಸಾಥ್ ನೀಡಿದ್ದರು. ಇದನ್ನೂ ಓದಿ:ಅಬಕಾರಿ ಜಂಟಿ ಆಯುಕ್ತರ ದಾಳಿ- ದಾಳಿಯಲ್ಲಿ ಒಟ್ಟು 98.52 ಕೋಟಿ ರೂ. ಮೊತ್ತದಬಿಯರ್ ಜಪ್ತಿ
ನಾಮಪತ್ರ ಸಲ್ಲಿಕೆಗೂ ಮುನ್ನ ಹೆಚ್‌ಡಿಕೆ ಅವರು ಮಂಡ್ಯ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ ನಾಲ್ವಡಿ ಕೃಷ್ಠರಾಜ ಇಡೆಯರ್ ಹಾಗೂ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಡಿದರು. ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಮಂಡ್ಯದಲ್ಲಿ ಬಿಜಹೆಪಿ-ಜೆಡಿಎಸ್ ನಾಯಕರು ಕಾವೇರಮ್ಮನ ಅಸ್ತç ಪ್ರಯೋಗ ಮಾಡಿದ್ದಾರೆ. ಇದನ್ನೂ ಓದಿ: 400 ಅಡಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

