ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ(K Kavitha) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಕೊಠಡಿಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ. ಇದನ್ನೂ ಓದಿ: ಲಿವ್ ಇನ್ ಪಾರ್ಟ್ನರ್‌ನ ಕೊಂದು ಕಬೋರ್ಡ್ನಲ್ಲಿ ತುಂಬಿಸಿಟ್ಟವನ ಬಂಧನ
ಇದಕ್ಕೂ ಮುನ್ನ ಕವಿತಾ ಅವರನ್ನು ಸೋಮವಾರ (ಏಪ್ರಿಲ್ 8) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನೂ ಓದಿ:ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತೆರಳಿದ ಬಾಲಕರು ನೀರು ಪಾಲು

