ಬೆಂಗಳೂರು: ರಾಮೇಶ್ವರಂ ಕೆಫೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗಾಗಲೇ ಇಬ್ಬರ ಬಂಧನ ಮಾಡಲಾಗಿದೆ. ಆಶ್ವರ್ಯವಾದರೂ ಇದು ನಿಜವಾದ ಸಂಗತಿ.
ಶಿವಮೊಗ್ಗದಲ್ಲಿ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಜೈಲು ಸೇಋಇದ ಮಾಝ್ ಮುನೀರ್‌ನನ್ನೇ ಈ ಪ್ರಕರಣದಲ್ಲಿ ರಾಷ್ಟಿಯ ತನಿಖಾ ದಳ ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರುವ ಮೊದಲೆ ಕೆಲವೊಂದು ಕಡೆ ಸ್ಪೋಟಕ್ಕೆ ಪ್ಲಾö್ಯನ್ ಮಾಡಿದ ಹಿನ್ನಲೆಯಲ್ಲಿ ಆತನನ್ನೇ ಎ೧ ಆರೋಪಿಯನ್ನಾಗಿ ಮಾಡಿದೆ ಎಂದು ಮೂಲಗಳು ತಿಳಿಸಿದೆ.. ಇದನ್ನೂ ಓದಿ:ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು ೭ ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ
ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರೋ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.. ಇದನ್ನೂ ಓದಿ: ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

