ಮಂಗಳೂರು: ವಿದ್ಯಾರ್ಥಿನಿಗೆ (Student) ಅಶ್ಲೀಲ ವಿಡಿಯೋ ತೋರಿಸಿ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ (Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕ ವಿರಾಜ್ ಜೈನ್ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಶಿಕ್ಷಕನಿಂದ ಲೈಂಗಿಕ ಕಿರುಕುಳದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ.
ಮಾರ್ಚ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ. ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್ ಜೈನ್ ಕಳೆದ ಜೂನ್ನಿಂದ ದೂರು ದಾಖಲಾಗುವ ದಿನದವರೆಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

