ಬೆಂಗಳೂರು: ಪಾಪಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಲಕ್ಷ್ಮಿ(7) ಮತ್ತು ಗೌತಮ್ (9) ಎಂದು ಗುರುತಿಸಲಾಗಿದೆ. ಇವರನ್ನು ಹೆತ್ತ ತಾಯಿಯಾದ ಗಂಗಾದೇವಿ ಕೊಲೆ ಮಾಡಿದ್ದಾಳೆ.
ಮಂಗಳವಾರ ರಾತ್ತಿ ತನ್ನ ಇಬ್ಬರು ಮಕ್ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಕಂಟ್ರೋಲ್ ರೂಂಗೆ ಕರೆ ಮಾಡಿ ನಾನು ಕೊಲೆ ಮಾಡಿರುವೇ, ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಕೊಡಲೇ ಸ್ಥಳಕ್ಕೆ ಆಗಮಿಸಿದ ಜಾಲಹಳ್ಳಿ ಪೊಲಿಶರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ
ಕಳೆದ ಮಾರ್ಚ್ ತಿಂಗಳಲ್ಲಿ ಗಂಡನ ಮೇಲೆಯೇ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಳು. ಗಂಡ ನನ್ನ ಮಗಳ ಮೇಳೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದಾನೆಂದು ದೂರು ನೀಡಿದ್ದಳು. ಗಾಂಗಾದೇವಿ ಕೊಟ್ಟ್ ದೊರಿನ ಆಧಾರದ ಮೇಲೆ ಗಂಡನನ್ನು ಬಂಧಿಸಿ ಜಾಲಹಳ್ಳಿ ಪೊಲೀಸರು ಜೈಲಿಗೆ ಕಳುಹಿಸಿದರು. ಅದಾದ ಬಲೀಕ ಈಗ ಇಬ್ಬರು ಕ್ಕಳನ್ನು ಕೊಲೆ ಮಾಡಿದ್ದಾಳೆ. ಇದನ್ನೂ ಓದಿ: ಕೇಜ್ರೀವಾಲ್ ಸಲ್ಲಿಸಿದ್ದ ಅರ್ಜಿ ವಜಾ
ಕೆಲಸ ಇಲ್ಲದೇ ಮಕ್ಕಳನ್ನು ಸಾಕುವುದು ಕಷ್ಟವಾಗುತ್ತಿತ್ತು. ಆ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವುದಾಗಿ ತಿಲಿದು ಬಂದಿದೆ. ಇದನ್ನೂ ಓದಿ: ಅಂದು “ಕೈ” ವಿಶ್ವದಿಂದ ಸಹಾಯ ಕೇಳಿತ್ತು, ಈಗ ಭಾರತ ವಿಶ್ವಕ್ಕೆ ಸಹಾಯ ಮಾಡುತ್ತಿದೆ: ಮೋದಿ