ಹೈದರಾಬಾದ್: ಹೈದರಾಬಾದ್‌ನಲ್ಲಿ (Hyderabad) 10 ವರ್ಷದ ಬಾಲಕಿಯನ್ನು ಯುವಕರ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ 10 ಮಂದಿಯನ್ನೂ ಬಂಧಿಸಲಾಗಿದೆ. ಆರೋಪಿಗಳನ್ನು ಕಾರು ಚಾಲಕ ಚಕ್ಕೋಲು ನರೇಶ್ (26), ವಿಜಯ್ ಕುಮಾರ್ (23), ಬಾಲಾಜಿ (23), ಗುಡ್ಡಂತಿ ಕೃಷ್ಣ (22), ಕಿರಣ್ ಕುಮಾರ್ (26), ಬೊಳ್ಳೆಪೋಗು ಅಜಯ್ (23), ಜೇಮ್ಸ್ ಕ್ಸೇವಿಯರ್ (24), ದೀಪಕ್ (25), ಸಬವತ್ ಹತ್ಯಾ ನಾಯ್ಕ್ (25), ಇಂಜಮುರಿ ಮಧು (30) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಒಂದು ವರ್ಷದ ಮಗುವನ್ನ ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ
ಅತ್ಯಾಚಾರ ಎಸಗಕ್ಕೂ ಮೊದಲು ಆರೋಪಿಗಳು ಸಂತ್ರಸ್ತೆಗೆ ಮತ್ತು ಬರುವ ಪಾನೀಯವನ್ನು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ. ಬಳಿಕ ಒಬ್ಬೊಬ್ಬರಾಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದು ಆಕೆ ಗರ್ಭಿಣಿಯಾಗಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ
ಸದ್ಯ ಆರೋಪಿಗಳಿಂದ ದ್ವಿಚಕ್ರವಾಹನ ಸೇರಿದಂತೆ ಮೊಬೈಲ್, ವಾಹನಗಳು, ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮರುದಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ