ಮಧುರೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿದೆ. ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು— ಮೃತರ ಕುಟುಂಬಗಳಿಗೆ: ₹3 ಲಕ್ಷ, ಗಂಭೀರ ಗಾಯಾಳುಗಳಿಗೆ: ₹1 ಲಕ್ಷ, ಸಣ್ಣ ಗಾಯಾಳುಗಳಿಗೆ: ₹50 ಸಾವಿರ, ಎಂದು ಪರಿಹಾರ ಘೋಷಿಸಿದ್ದಾರೆ.
ಪಿಎಂ ಮೋದಿ ಸಂತಾಪ – ಕೇಂದ್ರದಿಂದ ನೆರವು
ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಮೂಲಕ ಸಂತಾಪ ವ್ಯಕ್ತಪಡಿಸಿ, ಪಿಎಂ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ—ಮೃತರ ಕುಟುಂಬಗಳಿಗೆ: ₹2 ಲಕ್ಷ, ಗಾಯಾಳುಗಳಿಗೆ: ₹50 ಸಾವಿರ ಪರಿಹಾರ ಪ್ರಕಟಿಸಿದ್ದಾರೆ.
ಅಪಘಾತ ಹೇಗೆ ಸಂಭವಿಸಿತು?
ಭಾನುವಾರ ಘಟನೆ ನಡೆದಿದ್ದು, ಒಂದು ಬಸ್ ತಿರುಪುರದಿಂದ ಕಾರೈಕುಡಿಗೆ ಮತ್ತೊಂದು ಬಸ್ ಕಾರೈಕುಡಿಯಿಂದ ದಿಂಡಿಗಲ್ ಕಡೆಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಎರಡೂ ಬಸ್‌ಗಳು ವೇಗವಾಗಿ ಬರುತ್ತಿರುವಾಗ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಹಾಗೂ ಪರಿಶೀಲನಾ ಕಾರ್ಯಾಚರಣೆ ನಡೆಸಿದ್ದಾರೆ.

