ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ.ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (Saalumarada Thimmakka) ನಿಧನರಾಗಿದ್ದಾರೆ. 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮಕ್ಕಳಿಲ್ಲ ತಿಮ್ಮಕ್ಕನನ್ನು ಸಾಕು ಮಗ ಉಮೇಶ್ ಬಳ್ಳೂರು ನೋಡಿಕೊಳ್ಳುತ್ತಿದ್ದರು.
ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.
ತಿಮ್ಮಕ್ಕನವರು ಮಾಗಡಿ ತಾಲೂಕಿನಲ್ಲಿ 4.5 ಕಿ.ಮೀ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಅಕ್ಷರಸ್ಥರಲ್ಲದಿದ್ದರೂ, ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಮರಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು, ಅವುಗಳ ಬೆಳವಣಿಗೆಗೆ ಶ್ರಮಿಸಿದ್ದರು.
ಪದ್ಮಶ್ರೀ ಪ್ರಶಸ್ತಿ :
ಅವರ ಈ ಮಹತ್ತರ ಕಾರ್ಯವನ್ನು ಗುರುತಿಸಿ, 2019ರಲ್ಲಿ ಭಾರತ ಸರ್ಕಾರವು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತು. 1995ರಲ್ಲಿ ಅವರಿಗೆ ರಾಷ್ಟ್ರೀಯ ನಾಗರಿಕ ಪ್ರಶಸ್ತಿ ಸಹ ಲಭಿಸಿತು. ಅಮೇರಿಕಾದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್‌ನಲ್ಲಿರುವ “ತಿಮ್ಮಕ್ಕನ ಸಂಪನ್ಮೂಲಗಳು” ಎಂಬ ಪರಿಸರ ಶಿಕ್ಷಣ ಸಂಸ್ಥೆಗೆ ಅವರ ಹೆಸರಿಡಲಾಗಿದೆ. ಇದು ಅವರ ಅಂತಾರಾಷ್ಟ್ರೀಯ ಮಟ್ಟದ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.

