By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > 114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ಸಾವು
ರಾಷ್ಟ್ರೀಯ-NationalLatest

114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ಸಾವು

114-year-old marathon runner Fauja Singh dies in Punjab

Published July 15, 2025
Share
2 Min Read
SHARE

ಚಂಡೀಗಢ: ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ 114 ವರ್ಷದ ಫೌಜಾ ಸಿಂಗ್‌ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.

2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು. 89 ವರ್ಷವಾಗಿದ್ದಾಗ ಅವರ ಪತ್ನಿ ಮತ್ತು ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬಳಿಕ ಅವರು ಕುಗ್ಗಿ ಹೋಗಿದ್ದರು. ಬಳಿಕ ಅವರು ಖಿನ್ನತೆ ವಿರುದ್ಧ ಹೋರಾಡಲು ಆರಂಭಿಸಿದ್ದರು.

ಮ್ಯಾರಥಾನ್​ಗೆ ಸೇರಲು ನಿರ್ಧರಿಸಿದ್ದರು. ಅವರ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದರು. 1911ರಲ್ಲಿ ರೈತ ಕುಟುಂಬದಲ್ಲಿ ಜನಿಸಿದ್ದ ಸಿಂಗ್‌ ಕಿರಿಯ ಸಹೋದರನಾಗಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳ ಗೆದ್ದ ಸಾಧನೆ ಸಿಂಗ್‌ ಅವರದ್ದು. ಸಿಂಗ್‌ ಅವರ ಓಟದ ವೈಖರಿ, ಸಹಿಷ್ಣುತೆಯಿಂದಾಗಿ ಅವರನ್ನು ‘ಟರ್ಬನ್ಡ್ ಟೊರ್ನಾಡೊ’ ಎಂದೇ ಕರೆಯಲಾಗುತ್ತಿತ್ತು. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಸಿಂಗ್‌ ಜ್ಯೋತಿ ಹಿಡಿದಿದ್ದರು.

ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದ ಕಾರು ಪತ್ತೆಯಾಗಿಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಫೌಜಾ ಸಿಂಗ್‌ ಅವರ ನಿಧನಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

You Might Also Like

ದೂದ್‌ಗಂಗಾ ನದಿಯಲ್ಲಿ ಹೆಚ್ಚಿದ ಮೊಸಳೆ ಕಾಟ: ಸ್ನಾನಕ್ಕೆ ತೆರಳಿದ ರೈತ ಮೊಸಳೆ ಬಾಯಿಗೆ ಸಿಕ್ಕಿ ಸಾವು

ಹಿಜ್ಬುಲ್ಲಾಗೆ ಮತ್ತೊಂದು ಮರ್ಮಾಘಾತ, ಇಸ್ರೇಲ್ ದಾಳಿಯಲ್ಲಿ ನೂತನ ಮುಖ್ಯಸ್ಥನ ಹತ್ಯೆ..?

ವಸೂಲಿ ಮಾಡಿದ್ರೆ ಹುಷಾರ್, ಆಟೋ ಚಾಲಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಸಾವು

ಕೋಲ್ಕತ್ತಾ : ಹೋಟೆಲ್‌ಗೆ ಬೆಂಕಿಬಿದ್ದು 14 ಮಂದಿ ಸಜೀವ ದಹನ

TAGGED:Fauja SinghPunjab
Share This Article
Facebook Copy Link Print
Previous Article ಹೃದಯಾಘಾತದಿಂದ KSRTC ಬಸ್ ಚಾಲಕ ಸಾವು
Next Article ಜಿಂಕೆಮರಿ ಖ್ಯಾತಿಯ ನಂದಿತಾ ಶ್ವೇತಾ ಕನ್ನಡ ಚಿತ್ರರಂಗಕ್ಕೆ ರೀಎಂಟ್ರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up