ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ (Hathras, Uttarpradesh) ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, 25 ಮಂದಿ ಮಹಿಳೆಯರು ಸೇರಿ ಒಟ್ಟು 27 ಜನ ಸಾವನ್ನಪ್ಪಿದ್ದಾರೆ.
ರತಿಭಾನಪುರದಲ್ಲಿ ಭೋಲೆಬಾಬಾ ಪ್ರವಚನ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದರು. ಇನ್ನು ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋದರು.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಆಡಳಿತವು ಸ್ಥಳಕ್ಕೆ ಧಾವಿಸಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಎಟಾಹ್ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ, ಕೆಲವು ಸರಿಯಾಗಿಲ್ಲ: ಪರಂ

ಮಂಗಳವಾರ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತಕ್ಕೆ 116 ಮಂದಿ ಸಾವನ್ನಪ್ಪಿದ್ದಾರೆ. ಕಾರ್ಯಕ್ರಮ ನಡೆದ ಸ್ಥಳ ತುಂಬಾ ಚಿಕ್ಕದಾಗಿದ್ದು ಅಲ್ಲಿ ನೆರೆದಿದ್ದ ಜನಸಮೂಹಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತನಿಖೆಗೆ ಸಮಿತಿಯನ್ನು ರಚಿಸಲಾಗಿದ್ದು, ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ದರ್ಶನ್ ಅಭಿಮಾನಿ…!
ಘಟನೆ ಹೇಗಾಯ್ತು?
ಅಯೋಜಕರು 80 ಸಾವಿರ ಮಂದಿ ನಡೆಸುವ ಕಾರ್ಯಕ್ರಮ ಎಂದು ಹೇಳಿದ್ದರು. ಆದರೆ 1 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾರ್ಯಕ್ರಮದ ನಿರ್ಗಮನ ಜಾಗ ಬಹಳ ಕಿರಿದಾಗಿತ್ತು. ಜನ ಮರಳುತ್ತಿದ್ದಾಗ ಸಣ್ಣ ಮೋರಿ ಬಳಿ ಕಾಲ್ತುಳಿತ ಸಂಭವಿಸಿದೆ. ಇದನ್ನೂ ಓದಿ: ಕರಾವಳಿ, ಮಧ್ಯ ಕರ್ನಾಟಕ: ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ