ಮೆಕ್ಸಿಕೊ: ಮೆಕ್ಸಿಕನ್ ರಾಜ್ಯ ಗುವಾನಾಜುವಾಟೊದ ಇರಪುವಾಟೊ ನಗರದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 12 ಮಂದಿ ಸಾವನ್ನಪ್ಪಿದ್ದಾರೆ.
ಧಾರ್ಮಿಕ ಆಚರಣೆಯೊಂದು ನಡೆಯುತ್ತಿತ್ತು. ಜನರು ಬೀದಿಯಲ್ಲಿ ನೃತ್ಯ ಮಾಡುತ್ತಾ, ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಿಂದ ಭಯಭೀತರಾಗಿ ಜನರು ಓಡಿದ ದೃಶ್ಯಗಳಿರುವ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಇರಾಪುವಾಟೊ ಅಧಿಕಾರಿ ರೊಡಾಲ್ಫೊ ಗೊಮೆಜ್ ಸೆರ್ವಾಂಟೆಸ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಲಿಯಾದವರ ಸಂಖ್ಯೆ 12 ಕ್ಕೆ ಏರಿದೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ದಾಳಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಳೆದ ತಿಂಗಳು, ಗ್ವಾನಾಜುವಾಟೊದ ಸ್ಯಾನ್ ಬಾರ್ಟೊಲೊ ಡಿ ಬೆರಿಯೊಸ್‌ನಲ್ಲಿ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪಾರ್ಟಿ ಆಯೋಜಿಸಿದ್ದಾಗಲೂ ಗುಂಡಿನ ದಾಳಿ ನಡೆದಿತ್ತು. ಆಗ 7 ಮಂದಿ ಮೃತಪಟ್ಟಿದ್ದರು.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

