— ಕಂಗಾಲಾದ ಹಾಲು ಉತ್ಪಾದಕರು
ಕೋಲಾರ: ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ (Farmers) ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಗ್ ಶಾಕ್ ನೀಡಿದೆ.
ಹಾಲು ಉತ್ಪಾದನೆ ಹೆಚ್ಚಾಗಿದ್ದು, ಈ ಹಿನ್ನೆಲೆ ಕೆಎಂಎಫ್ ಹಾಲಿನ ದರ (Milk Price) ಏರಿಕೆ ಮಾಡಿತ್ತು. ಆದರೆ ಕೋಚಿಮುಲ್ ಆಡಳಿತ ಮಂಡಳಿ ದಿಢೀರ್ 2 ರೂ. ಕಡಿಮೆ ಮಾಡಿದ್ದು, ರೈತರು ಕಂಗಾಲಾಗಿದ್ದಾರೆ. ಇದನ್ನೂ ಓದಿ: 10 ವರ್ಷದ ಬಾಲಕಿ ಮೇಲೆ 10 ಮಂದಿ ಗ್ಯಾಂಗ್‌ರೇಪ್- ಆರೋಪಿಗಳ ಬಂಧನ
ಈಗಷ್ಟೇ ಮುಂಗಾರು ಆರಂಭವಾಗಿ ರೈತರು ನಿಟ್ಟುಸಿರು ಬಿಡುತ್ತಿದ್ದ ವೇಳೆ ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ.
ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದನ್ನೂ ಓದಿ: ಆಟೋ,ಕ್ಯಾಬ್ ಚಾಲಕರಿಂದ ಸಾರಿಗೆ ಇಲಾಖೆ ಮುಖ್ಯ ಕಚೇರಿ ಮುತ್ತಿಗೆ
ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

