ಬೆಂಗಳೂರು: 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕನ್ನಡದ ಖ್ಯಾತನಟ ಕಿಚ್ಚ ಸುದೀಪ್ ಹಾಗೂ ನಟಿ ಅನುಪಮಾ ಗೌಡಗೆ ರಾಜ್ಯ ಪ್ರಶಸ್ತಿ ಘೋಷಿಸಿದೆ.
ಐದು ವರ್ಷಗಳ ಬಳಿಕ ಕನ್ನಡ ಸಿನಿಮಾಗಳಿಗೆ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಿಸಿದೆ. 2019ನೇ ಸಾಲಿ ಚಿತ್ರಗಳಿಗೆ ಇದೀಗ ಪ್ರಶಸ್ತಿ ನೀಡಲು ಸರ್ಕಾರ ಮುಂದಾಗಿದೆ. ‘ಪೈಲ್ವಾನ್’ ಚಿತ್ರದ ನಟನೆಗಾಗಿ ಸುದೀಪ್ ಅತ್ಯುತ್ತಮ ನಟ, ‘ತ್ರಯಂಬಕಂ’ ಚಿತ್ರಕ್ಕಾಗಿ ಅನುಪಮಾ ಗೌಡ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
ರಾಜ್ಯ ಪ್ರಶಸ್ತಿಗಾಗಿ 180 ಚಿತ್ರತಂಡಗಳು ಅರ್ಜಿ ಹಾಕಿದ್ದವು. 8 ಸಿನಿಮಾಗಳು ನಿಯಮಾನುಸಾರ ಇಲ್ಲ ಎಂದು ಕೈಬಿಡಲಾಗಿತ್ತು. ಇನ್ನುಳಿದ 172 ಸಿನಿಮಾಗಳನ್ನು ತೀರ್ಪುಗಾರರು ವೀಕ್ಷಿಸಿ, ವಿಜೇತರನ್ನು ಆಯ್ಕೆ ಮಾಡಿದ್ದಾರೆ. ಪಿ. ಶೇಷಾದ್ರಿ ನಿರ್ದೇಶನದ ‘ಮೋಹನದಾಸ’ ಮೊದಲನೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಅದೇ ರೀತಿ ‘ಲವ್ ಮಾಕ್ಟೇಲ್’ 2ನೇ ಅತ್ಯುತ್ತಮ ಸಿನಿಮಾ, ‘ಅರ್ಘ್ಯಂ’ 3ನೇ ಅತ್ಯುತ್ತಮ ಸಿನಿಮಾ ಆಗಿ ಹೊರಹೊಮ್ಮಿದೆ. ಇನ್ನು ವಿಜೇತರಿಗೆ ಸಿಗುವ ಪದಕ, ನಗದು ಬಹುಮಾನದ ಬಗ್ಗೆ ಮಾಹಿತ್ಯ ಲಭ್ಯವಾಗಿದೆ.
2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿಜೇತರ ಮಾಹಿತಿ:
ಮೊದಲ ಅತ್ಯುತ್ತಮ ಚಿತ್ರ: ಮೋಹನದಾಸ
ಎರಡನೇ ಅತ್ಯುತ್ತಮ ಚಿತ್ರ: ಲವ್ ಮಾಕ್ ಟೈಲ್
ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಕನ್ನೇರಿ
ಅತ್ಯುತ್ತಮ ಜನಪ್ರಿಯ ಮಜರಂಜನಾ ಚಿತ್ರ: ಇಂಡಿಯಾ v/s ಇಂಗ್ಲೆಂಡ್
ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಟ್ರಿಬಲ್ ತಲಾಕ್ (ಬ್ಯಾರಿ ಭಾಷೆ)
ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಕಿಚ್ಚ ಸುದೀಪ್ (ಪೈಲ್ವಾನ್)
ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)
ಅತ್ಯುತ್ತಮ ಪೋಷಕ ನಟ (ಕೆ.ಎಸ್ ಅಶ್ವಥ್ ಪ್ರಶಸ್ತಿ): ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿ)
ಅತ್ಯುತ್ತಮ ಕಥೆ: ಜಯಂತ್ ಕಾಯ್ಕಿಣಿ ( ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ)
ಅತ್ಯುತ್ತಮ ಚಿತ್ರಕಥೆ: ಡಾರ್ಲಿಂಗ್ ಕೃಷ್ಣ (ಲವ್ ಮಾಕ್ ಟೈಲ್)
ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ)
ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್.ಭಾಸ್ಕರ್ (ಮೋಹನದಾಸ)
ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
ಅತ್ಯುತ್ತಮ ಸಂಕಲನ: ಜಿ. ಬಸವರಾಜ ಅರಸ್ (ಝಾನ್ಸಿ ಐ.ಪಿ.ಎಸ್)
ಅತ್ಯುತ್ತಮ ಬಾಲನಟ: ಮಾಸ್ಟರ್ ಪ್ರೀತಂ (ಮಿಂಚು ಹುಳು)
ಅತ್ಯುತ್ತಮ ಬಾಲನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
ಅತ್ಯುತ್ತಮ ಹಿನ್ನೆಲೆ ಗಾಯನ: ರಘು ದೀಕ್ಷಿತ್ (ಲವ್ ಮಾಕ್ ಟೈಲ್)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಡಾ. ಜಯದೇವಿ ಜಿಂಗಮ ಶೆಟ್ಟಿ (ರಾಗಭೈರವಿ)

