ಬೆಂಗಳೂರು: ಲೋಕಸಭಾ ಚುನಾವಣೆ (Lokasabha Election) ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಮತ್ತು ಚುನಾವಣಾ ಆಯೋಗ (Election Commission) ಹಣ, ಚಿನ್ನ ಬೆಳ್ಳಿ ಮತ್ತು ವಸ್ತುಗಳ ಅಕ್ರಮ ವಹಿವಾಟಿನ ಮೆಲೆ ಕಣ್ಣು ಇಟ್ಟಿವೆ. ನಗರದ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಕೆಜ್ಜಿಗಟ್ಟಲೆ ಚಿನ್ನ ವಜ್ರ ಮತ್ತು ಹಣ ಪತ್ತೆಯಾಗಿದೆ.
ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಶಂಕಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭಾರಣ ಪತ್ತೆಯಾಗಿದೆ. ಜಯನಗರ 3ನೇ ಬ್ಲಾಕ್‌ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು
ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ. ಇದನ್ನೂ ಓದಿ: ಡಾ. ರಾಜ್‌ಕುಮಾರ್ 95 ನೇ ವರ್ಷದ ಹುಟ್ಟುಹಬ್ಬ ಇಂದು
ಒಟ್ಟು 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ. ಇದನ್ನೂ ಓದಿ: ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

