ಢಾಕಾ : : ಬಾಂಗ್ಲಾದೇಶ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶಬಿಟ್ಟು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾ ಸೇನೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಘರ್ಷಣೆಯಲ್ಲಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ನೆರೆಯ ಬಾಗ್ಲಾದೇಶದ ಸದ್ಯದ ಸ್ಥಿತಿ.
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಾಗೂ ಸೇನೆಯೊಂದಿಗಿನ ಕಿತ್ತಾಟ ತಾರಕಕ್ಕೇರಿದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ.
ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅಂದ್ರೆ ಮಧ್ಯಾಹ್ನ 2:30ರ ಸುಮಾರಿಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂಗಾಬಬಾನ್‌ನಿಂದ ಅವರ ಕಿರಿಯ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಸುರಕ್ಷಿತ ಸ್ಥಳಕ್ಕೆ ಪ್ರಯಾಣ ಬೆಳೆಸಿದರು.ಶೇಖ್ ಹಸೀನಾ ರಾಜೀನಾಮೆ ಖಚಿತ ಪಡಿಸಿರುವ ಸೇನಾ ಮುಖ್ಯಸ್ಥರು, ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ರಚನೆ ಮಾಡುವುದಾಗಿ ತಿಳಿಸಿದ್ದಾರೆ.
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಸಲಾಗುತ್ತಿರುವ ಅಸಹಾಕರ ಚಳುವಳಿಯೂ ಪ್ರತಿಭಟನಾಕಾರರ ಮತ್ತು ಅಡಳಿತ ಅವಾಮಿ ಲೀಗ್ ಬೆಂಬಲಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಘರ್ಷಣೆಯಲ್ಲಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಆಗಸ್ಟ್ 04ರಂದು ಪ್ರತಿಭಟನಾಕಾರರು ಅಸಹಕಾರ ಚಳುವಳಿ ಆರಂಭಿಸಿದ್ದರು. ಇದಕ್ಕೆ ಅವಾಮಿ ಲೀಗ್, ಛಾತ್ರಾ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಯಿತ್ತು. ಈ ವೇಳೆ ಘರ್ಷಣೆ ಉಂಟಾಗಿದ್ದು, 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಘರ್ಷಣೆಯಲ್ಲಿ ಇಸ್ಕಾನ್, ಕಾಳಿ ಸೇರಿದಂತೆ ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ. ಘರ್ಷಣೆ ಸಂಬಂಧ ಭಾರತೀಯರು ಮನೆಯಿಂದ ಹೊರಬಾರದಂತೆ ವಿದೇಶಾಂಗ ರಾಯಭಾರಿ ಇಲಾಖೆ ಸೂಚಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್ ಸೇವೆ ಹಾಗೂ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಕರ್ಫ್ಯೂ ವಿಧಿಸಲಾಗಿದೆ.

