ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ.
ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಫರಿದಾಬಾದ್‌ನಲ್ಲಿ ಭೂಮಿ ಕಂಪಿಸಿದೆ. ಹರಿಯಾಣದ ಸೋನಿಪತ್, ರೋಹ್ಟಕ್ ಮತ್ತು ಹಿಸಾರ್‌ನಲ್ಲೂ ಭೂಮಿ ಕಂಪಿಸಿದೆ.

