By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

ವಿದೇಶ-InternationalLatest

Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

42 Indian pilgrims feared dead in bus-tanker collision near Medina in Saudi Arabia

Published November 17, 2025
Share
3 Min Read
sgdgdgdg sgdgdgdg sgdgdgdg
SHARE

Saudi Arabia : ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 42 ಮಂದಿ ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಎಂದು ಜೆಡ್ಡಾದ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. 40ಕ್ಕೂ ಅಧಿಕ ಭಾರತೀಯರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ಹೆಚ್ಚಿನವರು ತೆಲಂಗಾಣ ಮೂಲದವರು ಎಂದು ವರದಿಯಾಗಿದೆ. ಈ ಪೈಕಿ 16 ಮಂದಿ ಮಲ್ಲೇಪಲ್ಲಿ ನಿವಾಸಿಗಳು.

ಬಸ್ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ಮುಫ್ರಿಹಾತ್ ಬಳಿ ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆ ಸಮಯದಲ್ಲಿ ಅನೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು ಎಂದು ವರದಿಯಾಗಿದೆ. ಡಿಕ್ಕಿಯ ನಂತರ ಬಸ್ ಬೆಂಕಿಗೆ ಆಹುತಿಯಾದಾಗ ಅವರು ತಪ್ಪಿಸಿಕೊಳ್ಳಲು ಕಡಿಮೆ ಅವಕಾಶವಿತ್ತು. ಮೃತರಲ್ಲಿ ಕನಿಷ್ಠ 11 ಮಹಿಳೆಯರು ಮತ್ತು 10 ಮಕ್ಕಳು ಕೂಡ ಇದ್ದರು.

ಭಾನುವಾರ ಸೌದಿ ಅರೇಬಿಯಾದ ಸಮಯ ರಾತ್ರಿ 11 ಗಂಟೆ ಸುಮಾರಿಗೆ ಬಸ್ ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಹೆಚ್ಚಿನವರು ತೆಲಂಗಾಣದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದರು ಎನ್ನಲಾಗಿದೆ. ಮಲ್ಲೇಪಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣಿಸುತ್ತಿದ್ದರು. ಅಪಘಾತದ ನಂತರ, ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ 24/7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಬಸ್ ಬೆಂಕಿಗೆ ಆಹುತಿಯಾದಾಗ 42 ಉಮ್ರಾ ಯಾತ್ರಿಕರು ಬಸ್ಸಿನಲ್ಲಿದ್ದರು ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಉಪ ಮುಖ್ಯಸ್ಥ (ಡಿಸಿಎಂ) ಅಬು ಮಾಥೇನ್ ಜಾರ್ಜ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

24×7 ಸಹಾಯವಾಣಿ :
“ಸೌದಿ ಅರೇಬಿಯಾದ ಮದೀನಾ ಬಳಿ ಭಾರತೀಯ ಉಮ್ರಾ ಯಾತ್ರಿಕರು ಇದ್ದ ಬಸ್ ಭೀಕರ ಅಪಘಾತದ ಹಿನ್ನೆಲೆಯಲ್ಲಿ, ಜೆಡ್ಡಾದ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ” ಎಂದು ಕಾನ್ಸುಲೇಟ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

In view of a tragic bus accident near Madina, Saudi Arabia, involving Indian Umrah pilgirms, a 24×7 Control Room has been set up in Consulate General of India, Jeddah.

The contact details of the Helpline are as under:

8002440003 (Toll free)
0122614093
0126614276
0556122301…

— India in Jeddah (@CGIJeddah) November 17, 2025

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯೆ :
ವಿದೇಶಾಂಗ ವ್ಯವಹಾರಗಳ ಸಚಿವ (EAM) ಎಸ್. ಜೈಶಂಕರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸೌದಿ ಅರೇಬಿಯಾದ ಮದೀನಾದಲ್ಲಿ ನಡೆದ ದುರಂತದಿಂದ ತಮಗೆ ತೀವ್ರ ಆಘಾತವಾಗಿದೆ. ರಿಯಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜೆಡ್ಡಾದ ಕಾನ್ಸುಲೇಟ್ ಈ ಅಪಘಾತದಿಂದ ಹಾನಿಗೊಳಗಾದ ಭಾರತೀಯ ಪ್ರಜೆಗಳು ಮತ್ತು ಕುಟುಂಬಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿವೆ. ಮೃತರ ಕುಟುಂಬಗಳಿಗೆ ಸಂತಾಪಗಳು ಎಂದು ಅವರು ಎಕ್ಸ್​ ಪೋಸ್ಟ್​​​ನಲ್ಲಿ ಹೇಳಿದ್ದಾರೆ.

ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ, ವಿಶೇಷವಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ಮೃತದೇಹಗಳನ್ನು ಭಾರತಕ್ಕೆ ಮರಳಿ ತರುವಂತೆ ನಾನು ವಿನಂತಿಸುತ್ತೇವೆ ಮತ್ತು ಯಾರಾದರೂ ಗಾಯಗೊಂಡಿದ್ದರೆ, ಅವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಹೇಳಿದರು.

ತೆಲಂಗಾಣ ಸಿಎಂ ಎ. ರೇವಂತ್ ರೆಡ್ಡಿ ಸಂತಾಪ
ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ ನಂತರ ತೆಲಂಗಾಣ ಸರ್ಕಾರವು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಅಧಿಕೃತ ಹೇಳಿಕೆಯಲ್ಲಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ನವದೆಹಲಿಯಲ್ಲಿನ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಮತ್ತು ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸಲು ಸೂಚಿಸಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿದೆ.

You Might Also Like

ಸಿಎಂ ಕುರ್ಚಿ ಕದನ : ದೆಹಲಿಯಲ್ಲಿ ಖರ್ಗೆ ಮೀಟಿಂಗ್

ಪಾಕಿಸ್ತಾನ ಪರಮಾಣು ಪರೀಕ್ಷೆ ನಡೆಸಲಿದೆಯಾ..? ಸೀಕ್ರೆಟ್ ಬಿಚ್ಚಿಟ್ಟ ಟ್ರಂಪ್

ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ

ವಾಹನ ಸವಾರರಿಗೆ ಭಾರೀ ಶಾಕ್‌; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ

ಕೇಜ್ರಿವಾಲ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

TAGGED:Bus AccidentIndian pilgrimsSaudi Arabia
Share This Article
Facebook Copy Link Print
Previous Article Bel Bel Bel Blackbuck Death :ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು : 29ಕ್ಕೆ ಏರಿಕೆಯಾಯ್ತು ಸಾವಿನ ಸಂಖ್ಯೆ
Next Article Sheikh Hasina Sheikh Hasina : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿದ ನ್ಯಾಯಾಲಯ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up