ಕ್ಯಾಲಿಫೋರ್ನಿಯಾ : ದಕ್ಷಿಣ ಕ್ಯಾಲಿಫೋರ್ನಿಯಾದ ನಗರ ಲಾಸ್ ಏಂಜಲೀಸ್‌ನಲ್ಲಿ ಕೆನ್ನಾಲಿಗೆಯನ್ನು ಚಾಚಿರುವ ಭೀಕರ ಕಾಡ್ಗಿಚ್ಚು ಇಡೀ ನಗರವನ್ನೇ ಆಹುತಿಯನ್ನಾಗಿ ತೆಗೆದುಕೊಳ್ಳಲು ಮುಂದಾಗಿದೆ. ಈಗಾಗಲೇ ಈ ಭಯಾನಕ ಕಾಡ್ಗಿಚ್ಚಿಗೆ ಇದುವರೆಗೆ ಕನಿಷ್ಠ 5 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಮಾರು 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, 1,000 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸುಮಾರು 1 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಕೆಲವೆಡೆ ಅಸಂಖ್ಯಾತ ಐಷಾರಾಮಿ ಮನೆಗಳು ಬೆಂಕಿ ಹೊತ್ತಿಕೊಳ್ಳುವ ಭೀತಿಯಲ್ಲಿವೆ ಎಂದು ವರದಿಗಳು ತಿಳಿಸಿವೆ.
ಕಾಡ್ಗಿಚ್ಚು ಆರಂಭವಾದ ದಿನ ಸುಮಾರು 30000 ಜನರನ್ನು ಸ್ಥಳಾಂತರ ಮಾಡಲಾಗಿತ್ತು, ಇದೀಗ ಬೆಂಕಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆ 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದ್ದು, ಈಗಾಗಲೇ ಸುಮಾರು 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿ 1,000 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಕೆಲವೆಡೆ ಅಸಂಖ್ಯಾತ ಐಷಾರಾಮಿ ಮನೆಗಳು ಬೆಂಕಿಗಾಹುತಿಯಾಗಿದ್ದು, ಮತ್ತೂ ಕೆಲವು ಕಟ್ಟಡಗಳು ಅಗ್ನಿಗೆ ಬಲಿಯಾಗುವ ಭೀತಿಯಲ್ಲಿವೆ ಎಂದು ತಿಳಿದು ಬಂದಿದೆ.





ಸಣ್ಣ ಪ್ರಮಾಣದಲ್ಲಿ ಹೊತ್ತಿಕೊಡ್ಡಿಂದ್ದ ಕಾಡ್ಗಿಚ್ಚು ಮಂಗಳವಾರದ ವೇಳೆಗೆ ಜನನಿಬಿಡ ಪ್ರದೇಶಗಳಿಗೆ ವ್ಯಾಪಿಸಿದೆ. ನಿಯಂತ್ರಣಕ್ಕೆ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಮರೋಪಾದಿ ಕಾರ್ಯಾಚರಣೆ ನಡೆಸುತ್ತಿದೆ. ಬುಧವಾರ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯ ಬಹುತೇಕ ಯಶಸ್ವಿಯಾಗುವ ಸಾಧ್ಯತೆಗಳಿತ್ತು. ಈ ವೇಳೆ ಚಂಡಮಾರುತ ಗಾಳಿ ಬೀಸಿದ್ದರಿಂದ ಬೆಂಕಿ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸಿತು ಎಂದು ವರದಿ ಹೇಳಿದೆ.
50 ಶತಕೋಟಿ ಡಾಲರ್ ಸಂಪತ್ತು ನಷ್ಟ:
ಇನ್ನೂ ಲಾಸ್ ಏಂಜಲೀಸ್‌ನಲ್ಲಿ ಹಬ್ಬಿದ ಕಾಡ್ಗಿಚ್ಚಿನಿಂದ ಸುಮಾರು 50 ಶತಕೋಟಿ ಡಾಲರ್ (42,000 ಕೋಟಿ ರೂ.) ಸಂಪತ್ತು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

