ಅಲಪ್ಪುಳ: ಕೇರಳದ ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಲಕ್ಷದ್ವೀಪ್‌ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮುಹಮ್ಮದ್ ಜಬ್ಬಾರ್ ಮೃತ ದುರ್ದೈವಿಗಳು.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್‌ಕೋಡ್ ಬಳಿ ಅವಘಡ ಸಂಭವಿಸಿದೆ. ನಿನ್ನೆ ರಾತ್ರಿ ಕಲರ್‌ಕೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಗುರುವಾಯುರ್‌ನಿಂದ ಕಾಯಂಕುಲಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು, ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನ ಒಡೆದು ಒಳಗಿದ್ದ ಯುವಕರನ್ನು ಹೊರ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಕಾರಣ ಓವರ್‌ಟೇಕ್ ಮಾಡಲು ಚಾಲಕ ಮುಂದಾಗಿದ್ದ. ಈ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರನ್ನು ಸ್ವಲ್ಪ ಕತ್ತರಿಸಿ ಒಳಗಿದ್ದವರನ್ನು ಹೊರಗೆ ತೆಗೆಯಲಾಯಿತು. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ನಂತರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.