ಬೆಂಗಳೂರು: ಇಂದು ನಾಡಪ್ರಭು ಕೆಂಪೇಗೌಡ ಜಯಂತಿ (Kempegowda Jyanthi) ಹಿನ್ನಲೆ ಬಿಬಿಎಂಪಿಯಲ್ಲಿ (BBMP) ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ ಮಾಡಲಾಗಿದೆ.
ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಜೊತೆಗೆ ನಮನ ಸಲ್ಲಿಸಿ ಅದ್ದೂಋಿಯಾಗಿ ಜಯಂತಿಯನ್ನ ಆಚರಿಸಲಾಗಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಮತ್ತೊಂದು ಬಲಿ- 24 ವರ್ಷದ ಯುವತಿ ಸಾವು

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ , ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ವತಿಯಿಂದ 515 ಕೆಂಪೇಗೌಡ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಕೆಂಪೇಗೌಡರು ನಾಡಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಸಮಯ ಇದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ
ಈ ನಿಟ್ಟಿನಲ್ಲಿ ಬಿಬಿಎಂಪಿಯಿಂದ ಎಲ್ಲ ಜಿಲ್ಲೆಗಳಿಗೂ ಕೆಂಪೇಗೌಡ ಜಯಂತಿ ಆಚರಣೆಗೆ ಒಂದು ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಒಂದು ತಿಂಗಳ ಒಳಗೆ ಅದ್ಧೂರಿಯಾಗಿ ಬೆಂಗಳೂರು ಮಹಾ ನಗರ ಪಾಲಿಕೆ ವತಿಯಿಂದ ಸಹ ಕೆಂಪೇಗೌಡ ಜಯಂತಿ ಆಚರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

