ತುಮಕೂರು : ತುಮಕೂರಿನಲ್ಲಿ ರಾಜ್ಯಪಾಲರ ವಿರುದ್ಧ ಟೌನ್ ಹಾಲ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಮಾನವ ಸರಪಳಿ ನಿರ್ಮಿಸಿ,ಕೆಲಕಾಲ ವಾಹನ ತಡೆದು ಪ್ರತಿಭಟನೆ ಜಿಲ್ಲಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಕಾಂಗ್ರೆಸ್
ಆಯಾ ತಾಲೂಕುಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಟೌನ್ ಹಾಲ್ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ರ್ಯಾಲಿ ಮೂಲಕ ಆಗಮಿಸಿ ಡಿಸಿಗೆ ಮನವಿ ಸಲ್ಲಿಸಲಿರುವ ಕಾಂಗ್ರೆಸ್ ಕಾರ್ಯಕರ್ತರು . ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

