ಮುಂಬೈ : ಏಕ್ತಾ ಕಪೂರ್ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್ ಭಾಗ್ಯʼ ಮೂಲಕ ಜನಪ್ರಿಯರಾಗಿದ್ದ ಹಿರಿಯ ನಟಿ ಆಶಾ ಶರ್ಮಾ(88) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ʻಕುಂಕುಮ್ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್ ಹಾಗೂ ಕೃತಿ ಸನೋನ್ ನಟನೆಯ ʻಆದಿಪುರುಷ್ʼ ಸಿನಿಮಾದಲ್ಲಿ ʻಶಬರಿʼ ಪಾತ್ರ ನಿರ್ವಹಿಸಿದ್ದರು.

