ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 3 ರಿಂದ 5 ರವರೆಗೆ ಬ್ರೂನಿ ಮತ್ತು ಸಿಂಗಾಪುರ ಪ್ರವಾಸದಲ್ಲಿದ್ದಾರೆ ಮೊದಲು ಸೆಪ್ಟೆಂಬರ್ 3 ಮತ್ತು 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ. ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಗಳು ಎರಡೂ ದೇಶಗಳೊಂದಿಗೆ ಭಾರತದ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ. ಸಿಂಗಾಪುರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ.
ವ್ಯಾಪಾರ ಮತ್ತು ಹೂಡಿಕೆ, ಇಂಧನ, ಬಾಹ್ಯಾಕಾಶ ತಂತ್ರಜ್ಞಾನ, ಆರೋಗ್ಯ, ಸಾಮರ್ಥ್ಯ ನಿರ್ಮಾಣ, ಸಂಸ್ಕೃತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಭಾರತ ಮತ್ತು ಬ್ರೂನಿ ರಾಜತಾಂತ್ರಿಕ ಸಂಬಂಧದಲ್ಲಿ 40 ವರ್ಷಗಳನ್ನು ಪೂರೈಸುತ್ತಿವೆ. ನಾನು ಸಿಂಗಾಪುರದಲ್ಲಿ ಸುಲ್ತಾನ್ ಹಾಜಿ ಹಸನಲ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ, ನಾನು ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಪ್ರಧಾನ ಮಂತ್ರಿ ಲಾರೆನ್ಸ್ ವಾಂಗ್, ಹಿರಿಯ ಸಚಿವ ಲೀ ಹ್ಸೆನ್ ಲೂಂಗ್ ಮತ್ತು ಇತರ ಹಿರಿಯ ಸಚಿವರನ್ನು ಭೇಟಿಯಾಗುತ್ತೇನೆ. ನಾವು ಅನೇಕ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸಲು ಎದುರು ನೋಡುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಭಾರತವು ಬ್ರೂನಿಯಿಂದ ಹೈಡ್ರೋಕಾರ್ಬನ್‌ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಭಾರತವು ಈಗಾಗಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಬ್ರೂನಿಯೊಂದಿಗೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ಇದರೊಂದಿಗೆ, ಈ ಭೇಟಿಯು ಕಚ್ಚಾ ತೈಲ ಮತ್ತು ಹೈಡ್ರೋಕಾರ್ಬನ್ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ.
ಪ್ರಧಾನಿ ಮೋದಿ ಇತ್ತೀಚೆಗೆ ಪೋಲೆಂಡ್ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಈ ಭೇಟಿಯಲ್ಲಿ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವುದರ ಜೊತೆಗೆ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲಿದೆ ಎನ್ನಲಾಗಿದೆ.

