By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೃಷಿ ಕ್ಷೇತ್ರದ ಬಲವರ್ಧನೆಗೆ 13,966 ಕೋಟಿ ರೂ. ಬಂಪರ್ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೃಷಿ ಕ್ಷೇತ್ರದ ಬಲವರ್ಧನೆಗೆ 13,966 ಕೋಟಿ ರೂ. ಬಂಪರ್ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ

BlogLatestMain PostTop Storiesರಾಷ್ಟ್ರೀಯ-National

ಕೃಷಿ ಕ್ಷೇತ್ರದ ಬಲವರ್ಧನೆಗೆ 13,966 ಕೋಟಿ ರೂ. ಬಂಪರ್ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ

Cabinet clears ₹13,966 Cr plans for Digital Agri push, Climate Resilience

Published September 3, 2024
Share
2 Min Read
Ashwini Vaishnav
SHARE

ನವದೆಹಲಿ : ಕೇಂದ್ರ ಸರ್ಕಾರ ದೇಶದ ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತು ದೇಶಾದ್ಯಂತ ಆಹಾರ ಭದ್ರತೆ ಹೆಚ್ಚಿಸುವ ಆಶಯದೊಂದಿಗೆ 13,966 ಕೋಟಿ ರೂ.ಗಳ ಪ್ಯಾಕೇಜ್​ಗೆ ಅನುಮೋದನೆ ನೀಡಿದೆ. ಕೃಷಿ ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ರೈತರ ಜೀವನವನ್ನು ಸುಧಾರಿಸುವ ಆಶಯದೊಂದಿಗೆ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಏಳು ಪ್ರಮುಖ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ

ಯಾವುವು ಏಳು ಯೋಜನೆಗಳು ?
1.ಡಿಜಿಟಲ್ ಕೃಷಿ ಮಿಷನ್ :
ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ರಚನೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 20,817 ಕೋಟಿ ರೂ. ವೆಚ್ಚದ ಹೂಡಿಕೆಯೊಂದಿಗೆ ಡಿಜಿಟಲ್ ಕೃಷಿ ಮಿಷನ್ ಸ್ಥಾಪನೆಗೊಳ್ಳಲಿದೆ.

2.ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆ :
ದೇಶದ ಜನರಿಗೆ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆ ಖಚಿತ ಪಡಿಸಿಕೊಳ್ಳಲು ರೂ. 3,979 ಕೋಟಿ ವೆಚ್ಚದ ಯೋಜನೆ ಘೋಷಿಸಲಾಗಿದೆ. ಹಸಿವು ಮತ್ತು ಅಪೌಷ್ಟಿಕತೆ ನಿಭಾಯಿಸುವ ಈ ಯೋಜನೆ ಪೌಷ್ಟಿಕ ಆಹಾರದ ಲಭ್ಯತೆಯನ್ನೂ ಸುಧಾರಿಸಲಿದೆ.

3.ಕೃಷಿ ಶಿಕ್ಷಣ, ನಿರ್ವಹಣಾ ಯೋಜನೆ :
ಕೃಷಿ ಶಿಕ್ಷಣ ಮತ್ತು ನಿರ್ವಹಣೆ ಹೆಚ್ಚಿಸಲು ರೂ. 2,291 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ಈ ಉಪಕ್ರಮ ರೈತರಿಗೆ ತರಬೇತಿ ಮತ್ತು ಶಿಕ್ಷಣ ನೀಡುವ ಗುರಿ ಹೊಂದಿದೆ. ರೈತರ ಉತ್ಪಾದಕತೆ, ಆದಾಯ ಸುಧಾರಿಸಲು ಅಗತ್ಯ ಕೌಶಲ್ಯ ಒದಗಿಸಲಿದೆ.

4.ತೋಟಗಾರಿಕೆ ಯೋಜನೆ :
ಹಣ್ಣು, ತರಕಾರಿ ಮತ್ತು ಇತರ ಬೆಳೆಗಳ ಬೆಳವಣಿಗೆ ಉತ್ತೇಜಿಸುವ ಮೇಲೆ ಕೇಂದ್ರೀಕರಿಸುವ ರೂ. 860 ಕೋಟಿ ಮೌಲ್ಯದ ತೋಟಗಾರಿಕೆ ಯೋಜನೆ ಇದಾಗಿದೆ. ಕೃಷಿಯನ್ನು ವೈವಿಧ್ಯಗೊಳಿಸಲು, ಸುಸ್ಥಿರ ಕೃಷಿ ಪದ್ಧತಿ ಪೋ›ತ್ಸಾಹಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ.

5.ಜಾನುವಾರು ಆರೋಗ್ಯ ನಿರ್ವಹಣೆ ಮತ್ತು ಉತ್ಪಾದನಾ ಯೋಜನೆ :
ಜಾನುವಾರು ಆರೋಗ್ಯ ನಿರ್ವಹಣೆ ಮತ್ತು ಉತ್ಪಾದನೆಗೆ -ಠಿ;1,702 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ. ಇದು ಪ್ರಾಣಿಗಳ ಆರೋಗ್ಯ ಸೇವೆಗಳನ್ನು ಸುಧಾರಿಸಲಿದೆ. ಮತ್ತು ಡೈರಿ ಮತ್ತು ಮಾಂಸದ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.

6.ಕೃಷಿ ವಿಜ್ಞಾನ ಕೇಂದ್ರದ ಬಲವರ್ಧನೆ :
ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ನೆಟ್​ವರ್ಕ್​ಗೆ ರೂ. 1,202 ಕೋಟಿ ಮೀಸಲಿಡಲಿದೆ. ಆಧುನಿಕ ಕೃಷಿ ತಂತ್ರಗಳನ್ನು ಉತ್ತೇಜಿಸುವಲ್ಲಿ ಮತ್ತು ರೈತರಿಗೆ ಸ್ಥಳದಲ್ಲೇ ಅಗತ್ಯ ಬೆಂಬಲ ಒದಗಿಸುವಲ್ಲಿ ಈ ಕೇಂದ್ರಗಳು ನಿರ್ಣಾಯಕ ಪಾತ್ರ ವಹಿಸಲಿವೆ.

7.ನೈಸರ್ಗಿಕ ಸಂಪನ್ಮೂಲ ನಿರ್ವಹಣೆ :
ನೈಸರ್ಗಿಕ ಸಂಪನ್ಮೂಲ ನಿರ್ವಹಣೆಗಾಗಿ ರೂ. 1,115 ಕೋಟಿ ವೆಚ್ಚದ ಯೋಜನೆಗೂ ಸಮ್ಮತಿಸಲಾಗಿದೆ. ಈ ಯೋಜನೆಯು ಭಾರತದಲ್ಲಿ ಕೃಷಿಯ ದೀರ್ಘಾವಧಿಯ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೇಲೆ ಕೇಂದ್ರೀಕರಿಸಲಿದೆ.

You Might Also Like

ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’

ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!

ಸಂವಿಧಾನ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯಾತೀತ’ ಪದಗಳನ್ನ ತೆಗೆಯಲು ಸಾಧ್ಯವಿಲ್ಲ : ಸುಪ್ರೀಂ

ಅ.2ರಂದು ತೆರೆಗೆ ಬರುತ್ತಿರುವ ಕಾಂತಾರ : ಚಾಪ್ಟರ್‌-1 ಬುಕಿಂಗ್‌ ಆರಂಭ

ತಂದೆಯ ಕಾರು ಹರಿದು ಮಗು ದುರ್ಮರಣ

TAGGED:Cabinet MeetingClimate ResilienceDigital Agri
Share This Article
Facebook Copy Link Print
Previous Article Narendra Modi ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ
Next Article gang of saree thieves arrested in Bangalore ಬೆಂಗಳೂರಲ್ಲಿ ಖತರ್ನಾಕ್ ಸೀರೆ ಕಳ್ಳಿಯರ ಗ್ಯಾಂಗ್ ಅರೆಸ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up