ಗೌರಿ ಹಬ್ಬದ ಶುಭ ದಿನದಂದು ಬೆಂಗಳೂರಿನ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ.
ನಟಿ ಕಂ ನಿರೂಪಕಿ ಜಾನ್ವಿ ರಾಯಲ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ, ನಿರ್ದೇಶಕ ವಿಖ್ಯಾತ್ ಪತ್ನಿ ಸ್ವಾತಿ ವಿಖ್ಯಾತ್ ಕ್ಯಾಮೆರಾಗೆ ಚಾಲನೆ ಕೊಟ್ಟಿದ್ದಾರೆ.ರಮೇಶ್ ಅರವಿಂದ್ ಹಾಗೂ ಗಣೇಶ್ ಸಂಗಮದ ಹೊಸ ಸಿನಿಮಾಗೆ Your’s sincerely ರಾಮ್ ಎಂಬ ಕ್ಲಾಸ್ ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ.
ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನು ಒಟ್ಟುಗೂಡಿಸಿ ಪುಷ್ಪಕ ವಿಮಾನ, ಇನ್ಸ್‌ಪೆಕ್ಟರ್ ವಿಕ್ರಮ್, ಮಾನ್ಸೂನ್ ರಾಗದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ ಆರ್ ಈ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ನಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಜೆ ಅನೂಪ್ ಸೀಳಿನ್ ಸಂಗೀತ, ಗುಣ ಕಲಾ ನಿರ್ದೇಶನ , ಪ್ರಶಾಂತ್ ರಾಜಪ್ಪ , ಯದುನಂದನ್ ಹಾಗೂ ಸಚಿನ್ ಸಂಭಾಷಣೆ ಚಿತ್ರಕ್ಕಿದೆ. ಆಡಿಯೊ ಹಕ್ಕುಗಳು ಆನಂದ್ ಆಡಿಯೊಗೆ ದಾಖಲೆ ಬೆಲೆಗೆ ಮಾರಾಟವಾಗಿದೆ. ನಾಯಕಿ ಸೇರಿದಂತೆ ಉಳಿದ ಪಾತ್ರವರ್ಗವನ್ನು ಇನ್ನಷ್ಟೇ ನಿರ್ಧರಿಸಬೇಕಾಗಿದೆ.

