ವಿಜಯಪುರ :ಜಾತ್ರಾ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ದೇವರ ಹಿಪ್ಪರಗಿ ತಾಲ್ಲೂಕಿನ ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಬಿ. ಇಂಗಳಗಿ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ ಬಡಿಗೇರ (24) ರಥದ ಚಕ್ರಕ್ಕೆ ಸಿಲುಕಿ ಸಾವನಪ್ಪಿದ್ದಾನೆ. ರಥದ ಚಕ್ರ ಯುವಕನ ಮೇಲೆ ಹರಿಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
👉 Please Follow our WhatsApp Channel for BREAKING News
ಈ ದುರಂತದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.ಬಿ.ಬಿ. ಇಂಗಳಗಿ ಗ್ರಾಮದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದೆ.
ರಥವನ್ನು ಎಳೆಯುವ ವೇಳೆ ಆಯತಪ್ಪಿ ಯುವಕ ಚಕ್ರದ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ದೇವೇಂದ್ರನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದಾಗ ಮಾರ್ಗ ಮಧ್ಯೆದಲ್ಲಿಅಸುನೀಗಿದ್ದಾನೆ.

