ಬೆಂಗಳೂರು : ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.
5-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆಎಎಸ್‌ಎಸ್) ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ. 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿಸಲಾಗಿದೆ. 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತ್ರತವಾದ ಆದೇಶಿಸಲಾಗಿದೆ.
👉 Please Follow our WhatsApp Channel for BREAKING News
ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ಅದರಂತೆ, ಸರ್ಕಾರ ದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್‌ಎಸ್) ಸೌಲಭ್ಯ ಅನುಷ್ಠಾನ ಆಗುವವರೆಗೆ ಈ ವೈದ್ಯಕೀಯ ಸೌಲಭ್ಯ ಲಭ್ಯವಿರಲಿದೆ.

