ಅಭಿಮನ್ಯು ಕಾಶಿನಾಥ್ ಅಭಿನಯದ “ಎಲ್ಲಿಗೆ ಪಯಣ ಯಾವುದೋ ದಾರಿ” ಟೀಸರ್ ಟೀಸರ್ ಬಿಡುಗಡೆಯಾಗಿದೆ. ಈಗಾಗಲೇ ತಣ್ಣಗೆ ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರದಲ್ಲಿ ಅಭಿಮನ್ಯುವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ.
ಇದು ಕಿರಣ್ ಎಸ್ ಸೂರ್ಯ ನಿರ್ದೇಶನದ ಚೊಚ್ಚಲ ಚಿತ್ರ. ಈಗಾಗಲೇ ಹನ್ನೆರಡು ವರ್ಷಗಳ ಕಾಲ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವವರು ಕಿರಣ್. ಈ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಲವ್ ಕಂ ಥ್ರಿಲ್ಲರ್ ಜಾನರಿನ ಚಿತ್ರ.
ವಿಶೇಷವೆಂದರೆ, ಕಿಚ್ಚಾ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ಶ್ರೀಲಕ್ಷ್ಮಿ ಒಂದೊಂದು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎರಡು ಹಾಡುಗಳಿಗೆ ಖುದ್ದು ನಿರ್ದೇಶಕ ಕಿರಣ್ ಎಸ್ ಸೂರ್ಯ ಸಾಹಿತ್ಯ ಬರೆದಿದ್ದಾರೆ.
ಸುದರ್ಶನ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಪೋಸ್ಟ್ ಪ್ರೊಡಕ್ಷನ್ ಹಂತ ದಾಟಿಕೊಂಡಿರುವ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ.

