ಬೆಂಗಳೂರು : ಇತ್ತೀಚಿಗೆ ನಮ್ಮ ಮೆಟ್ರೋ ಓದು ರೀತಿಯ ಆತ್ಮಹತ್ಯೆಯ ಹಾಟ್’ ಸ್ಪಾಟ್ ಆದಂತಿದೆ. ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮಧ್ಯಾಹ್ನ 2.20ರ ಸುಮಾರಿಗೆ ಬಿಹಾರ ಮೂಲದ ಸಿದ್ದಾರ್ಥ್ (30) ಎಂಬಾತ ನೇರಳೆ ಮಾರ್ಗದ ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ವೈಟ್ಫೀಲ್ಡ್ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೆಟ್ರೋ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದ್ದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದುಕೊಂಡು ಹೋಗಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ
ಯಾವುದೇ ಗಾಯಗಳು ವರದಿಯಾಗಿಲ್ಲ.
ಘಟನೆ ಹಿನ್ನಲೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ನಿಮಿಷ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, 2:30 ಗಂಟೆಗೆ ಸೇವೆ ಪುನರಾರಂಭಿಸಲಾಯಿತು.

