By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರು ದಸರಾದಲ್ಲಿ “ಯುವ ಸಂಭ್ರಮ” ಶುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮೈಸೂರು ದಸರಾದಲ್ಲಿ “ಯುವ ಸಂಭ್ರಮ” ಶುರು

BlogLatestಮೈಸೂರು-Mysuruರಾಜ್ಯ-Karnataka

ಮೈಸೂರು ದಸರಾದಲ್ಲಿ “ಯುವ ಸಂಭ್ರಮ” ಶುರು

Published September 25, 2024
Share
4 Min Read
Yuva Sambhrama
SHARE

ಮೈಸೂರು,ಸೆ. 25- ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹಾದೇವಪ್ಪನವರು ಹೇಳಿದರು.

ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ, ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಯುವಸಂಭ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯದ 470 ಕಾಲೇಜುಗಳಿಂದ ಯುವ ಪ್ರತಿಭೆಗಳು ಅರ್ಜಿ ಸಲ್ಲಿಸಿದ್ದು, 150 ಕಾಲೇಜುಗಳು ಆಯ್ಕೆಯಾಗಿ 120 ಕಾಲೇಜುಗಳನ್ನು ಕೈ ಬಿಡಲಾಗಿತ್ತು. ಆದರೇ ಯಾವುದೇ ಪ್ರತಿಭೆಗಳಿಗೆ ಮೋಸವಾಗಬಾರದು ಎಂಬ ಕಾರಣದಿಂದ ಯುವ ಸಂಭ್ರಮವನ್ನು ಒಂದು ದಿನ ಹೆಚ್ಚು ಮಾಡಿ ಅವರಿಗೂ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಯುವಸಂಭ್ರಮದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಲಿದ್ದು, ಅಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ನೋಡಬೇಕು. ಕಾರ್ಯಕ್ರಮ ನೀಡಲು ಬಂದಿರುವಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಅವರಲ್ಲಿ ಇನ್ನು ಹೆಚ್ಚಿನ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದು ಹೇಳಿದರು.

ಸಂಸ್ಕೃತಿಯಲ್ಲಿ ಧರ್ಮ ಒಂದು ಭಾಗವಾಗಿದ್ದು, ಧರ್ಮವೇ ಸಂಸ್ಕೃತಿಯಲ್ಲ. ಎಲ್ಲಾ ಯುವ ಪೀಳಿಗೆಗಳು ಇದನ್ನು ಅರಿತು ಎಲ್ಲರಿಗೂ ಸಮಾನತೆಯನ್ನು ತಂದುಕೊಟ್ಟಿರುವ ಸಂವಿಧಾನದ ಆಶಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಬ್ರಾತೃತ್ವವನ್ನು ಬೆಳೆಸಬೇಕು ಎಂದು ಹೇಳಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಸರಾ ಮಹೋತ್ಸವದ ಮೊದಲನೇ ಕಾರ್ಯಕ್ರಮವಾದ ಯುವಸಂಭ್ರಮ ಯುವಕರಿಗೆ ರಾಸಾದೌತಣವಾಗಿದೆ. ಈ ಕಾರ್ಯಕ್ರಮವನ್ನು ವಿಜೃಂಭಣೆಯಾಗಿ ಮಾಡಲು ಸರ್ಕಾರ ಕಾರಣವಾಗಿದ್ದು, ಅತಿ ಹೆಚ್ಚು ಅನುದಾನವನ್ನು ನೀಡಿ ದಸರಾ ಆಚರಣೆಯ ಯುವಸಂಭ್ರಮದಲ್ಲಿ ಅವಿಸ್ಮರಣೀಯವಾಗಿರುವ ಕಾರ್ಯಕ್ರಮಗಳನ್ನು ನೀಡುವಂತೆ ತಿಳಿಸಿದರು.

ಎಲ್ಲಾ ಯುವಜನರಿಗಾಗಿ ಮಾಡಿರುವ ಕಾರ್ಯಕ್ರಮದಲ್ಲಿ ಕ್ವಾಲಿಟಿ ಇರುವಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದ್ದು, ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಲಿದ್ದಾರೆ. ಸಾರ್ವಜನಿಕರ ಬೆಂಬಲದಿಂದ ಮಾತ್ರ ಈ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಖ್ಯಾತ ಕನ್ನಡ ಚಲನಚಿತ್ರ ನಟರಾದ ಶ್ರೀ ಮುರುಳಿ ಅವರು ಮಾತನಾಡಿ, ದಸರಾ ಎಂದರೆ ಎಲ್ಲರಿಗೂ ಬಹಳ ಅಚ್ಚುಮೆಚ್ಚು. ದಸರಾ ಬಂತೆಂದರೆ ಇಲ್ಲಿನ ಜನರು ಹಾಗೂ ಮೈಸೂರಿನ ಆಡಂಬರವನ್ನು ನೋಡಲು ಎರಡು ಕಣ್ಣು ಸಾಲದು. ಇಂತಹ ಅದ್ಬುತ ದೃಶ್ಯಗಳು ಪ್ರಪಂಚದಲ್ಲಿ ಎಲ್ಲೋಯೂ ನೋಡಲು ಸಿಗುವುದಿಲ್ಲ ಎಂದರು.

ನಮ್ಮ ನಾಡಹಬ್ಬವನ್ನು ತಲಾ ತಲಾತರಗಳಿಂದ ಬೆಳೆಸಿಕೊಂಡು ಬಂದು, ಇಂದಿಗೂ ಅದೇ ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತಸದ ಸಂಗತಿ. ನಾವು ಇದರಲ್ಲಿ ಪಾಲ್ಗೊಂಡಿರುವುದು ಹೆಚ್ಚಿನ ಖುಷಿ ನೀಡಿದೆ. ಕರ್ನಾಟಕದ ಹೆಮ್ಮೆಯಾಗಿರುವ ದಸರಾವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಿ ಯಶಸ್ವಿಗೊಳಿಸೋಣ ಎಂದರು.

ಈ ವೇದಿಕೆಯಲ್ಲಿ ಹಾಗೂ ವೇದಿಕೆಯ ಮುಂಭಾಗದಲ್ಲಿ ಬಹಳಷ್ಟು ಪ್ರತಿಭೆಗಳಿವೆ. ಎಲ್ಲರೂ ತಮ್ಮ ನೆಚ್ಚಿನ ಕ್ಷೇತ್ರದಲ್ಲಿ ಸಾಧನೆ ಮಾಡಿ, ನಮ್ಮ ಕರ್ನಾಟಕ ಭಾವುಟ ಎಲ್ಲೆಡೆ ಹಾರುವಂತೆ ಮಾಡಬೇಕು ಎಂದರು.

ಖ್ಯಾತ ಕನ್ನಡ ಚಲನಚಿತ್ರ ನಟಿಯಾದ ರುಕ್ಮಿಣಿ ವಸಂತ್ ಅವರು ಮಾತನಾಡಿ, ವಿಶ್ವ ವಿಖ್ಯಾತ ನಾಡಹಬ್ಬದಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಮೈಸೂರು ಜನತೆ ಯಾವಾಗಲು ನಮ್ಮ ಮೇಲೆ ಚಿತ್ರ ರಂಗದ ಮೇಲೆ ಇಟ್ಟಿರುವ ಪ್ರೀತಿಗೆ ಎಂದಿಗೂ ಚಿರಋಣಿ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರ್ ನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಾಣಾಧಿಕಾರಿಗಳಾದ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಡಿ ಸಿ ಪಿ ಮುತ್ತುರಾಜ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಅ.3 ರಂದು ದಸರಾ ಚಲನಚಿತ್ರೋತ್ಸವ :

WhatsApp Image 2024 09 25 at 10.37.38 fbe1fe74 WhatsApp Image 2024 09 25 at 10.37.38 fbe1fe74 WhatsApp Image 2024 09 25 at 10.37.38 fbe1fe74


ದಸರಾ ಮಹೋತ್ಸವದ ಅಂಗವಾಗಿ ಚಲನಚಿತ್ರೋತ್ಸವ ಏರ್ಪಡಿಸಲಾಗಿದ್ದು,ಅ. 3 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರದ ಖ್ಯಾತ ನಾಯಕನಟರಾದ ರಮೇಶ್ ಅರವಿಂದ್, ಡಾಲಿ ಧನಂಜಯ, ಕಾಂತಾರ ಖ್ಯಾತಿಯ ಸಪ್ತಮಿ ಗೌಡ, ಶರಣ್ಯ ಶೆಟ್ಟಿ, ಅಕ್ಷಿತ ಬೋಪಯ್ಯ ಮೆರಗು ನೀಡಲಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಸಾಧುಕೋಕಿಲಾ ತಂಡದವರಿಂದ ಸಂಗೀತ ಮತ್ತು ಮನರಂಜನೆ ಕಾರ್ಯಕ್ರಮ ನಡೆಯಲಿದೆ.

ನಿರ್ಮಾಪಕ, ಕನ್ನಡದ ಮುತ್ತು – ಕರ್ನಾಟಕ ಕುಳ್ಳ ದಿವಂಗತ ದ್ವಾರಕೀಶ್ ಅವರ ಸವಿನೆನಪಿನಲ್ಲಿ ಈ ಬಾರಿಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗಿದ್ದು, ಅವರ ಪುತ್ರ ಯೋಗಿಶ್ ಅವರಿಗೆ ಗೌರವ ಸಮರ್ಪಣೆ ಹಾಗೂ ದ್ವಾರಕೀಶ್ ಅಭಿನಯದ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಅ.4 ರಿಂದ 10 ರವರೆಗೆ ಬಿ.ಎಂ ಹ್ಯೆಬಿಟೆಡ್ ಮಾಲ್‌ನ DRC ಸಿನಿಮಾಸ್‌ನಲ್ಲಿ ಒಂದು ಪರದೆ ಹಾಗೂ ಮಾಲ್ ಆಫ್ ಮೈಸೂರಿನ ಐನಾಕ್ಸ್ ಸಿನಿಮಾಸ್‌ನಲ್ಲಿ 3 ಪರದೆಗಳಲ್ಲಿ ಪ್ರದರ್ಶನ ಗೊಳ್ಳಲಿದೆ

ಓಲ್ಡ್ ಈಸ್ ಗೋಲ್ಡ್ ಶೀರ್ಷಿಕೆಯಲ್ಲಿ ಡಾ| ರಾಜ್ ಕುಮಾರ್. ಡಾ ವಿಷ್ಣುವರ್ಧನ್, ಡಾ. ಅಂಬರೀಷ್, ಶಂಕರ್‌ನಾಗ್ ಹಾಗೂ ಪುನೀತ್ ರಾಜಕುಮಾರ್, ರಮೇಶ್ ಅರವಿಂದ, ಶ್ರೀನಾಥ್, ಶಿವವರಾಜ್ ಕುಮಾರ್, ರವಿಚಂದ್ರನ್ ಹಾಗೂ ದಿ|| ಅಪರ್ಣ ಸಿನಿಮಾಗಳನ್ನು ವೀಕ್ಷಿಸಬಹುದಾಗಿದೆ.

ಈ ಬಾರಿ ಬುಡಕಟ್ಟು ಭಾಷೆಗಳಾದ ಬೊಡೊ, ಜನ್ಸಿಯ ಹಾಗೂ ಕರ್ನಾಟಕ ಕೊಡವ ಮತ್ತು ಅರೆಭಾಷೆಯ ಚಲನಚಿತ್ರಗಳು ಪ್ರದರ್ಶನವಾಗುತ್ತಿದ್ದು, ಒಟ್ಟಾರೆ 112 ಚಲನಚಿತ್ರಗಳನ್ನು ವೀಕ್ಷಿಸಬಹುದಾಗಿದೆ.

ಈ ಬಾರಿ ವಿಶೇಷವಾಗಿ ಸಿನಿ ಪೋಟೋ ಪ್ರದರ್ಶನವನ್ನು ಐನಾಕ್ಸ್ ಸಿನಿಮಾಸ್ ಹೊರ ಆವರಣದಲ್ಲಿ ಅಕ್ಟೋಬರ್ 4 ರಿಂದ 10 ರವರೆಗೆ ಆಯೋಜನೆ ಮಾಡಲಾಗಿದೆ.

ಯುವಜನಾಂಗಕ್ಕೆ ಪ್ರೋತ್ಸಾಹ ನೀಡಲು ಕಿರುಚಿತ್ರ ಸ್ಪರ್ಧೆ ಏರ್ಪಡಿಸಲಾಗಿದ್ದು, ಆಯ್ಕೆಗೊಂಡ ಅತ್ಯುತ್ತಮ 10 ಕಿರುಚಿತ್ರಗಳನ್ನು ಸಹ ದೊಡ್ಡ ಪರದೆಯಲ್ಲಿ ಪ್ರದರ್ಶಿಸಲಾಗುವುದು. ಅಕ್ಟೋಬರ್ 8 ರಂದು ಬಹುಮಾನ ವಿತರಣೆ ಮಾಡಲಿದ್ದು, ಖ್ಯಾತ ನಟ ಮಂಡ್ಯ ರಮೇಶ್ ಭಾಗವಹಿಸಲಿದ್ದಾರೆ.

You Might Also Like

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ–ಹವನ

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರ ಸಾವು

5 ವರ್ಷದ ಬಳಿಕ ಚೀನಾಗೆ ಜೈ ಶಂಕರ್ ಭೇಟಿ, ದ್ವಿಪಕ್ಷೀಯ ಸಂಬಂಧ ಕುರಿತು ಮಾತುಕತೆ

ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ

ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ

TAGGED:Dasara 2024Dasara Yuva Sambhrama
Share This Article
Facebook Copy Link Print
Previous Article Dasara Gold Card ದಸರಾ ಗೋಲ್ಡ್‌ ಕಾರ್ಡ್‌ : ಅನುಕೂಲಗಳೇನು..? ಬೆಲೆ ಎಷ್ಟು..?
Next Article Siddaramaiah Vs Kumaraswamy ರಾಜೀನಾಮೆ ಕೊಡ್ತಾರಾ ಎಂದ ಸಿಎಂ ಸಿದ್ಧರಾಮಯ್ಯಗೆ ಹೆಚ್ಡಿಕೆ ತಿರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up