ಬೆಂಗಳೂರು : ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.ಸೆಪ್ಟೆಂಬರ್ 3ರಂದು ಬೆಳಗಿನ ಜಾವ 3ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗು ಜನಿಸಿದೆ ಅನ್ನೋದು ಕುಟುಂಬದ ಖುಷಿ ಹೆಚ್ಚಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪೊನ್ನಣ್ಣ, ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ.ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹರ್ಷಿಕಾ ಹಲವು ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿದ್ದು, ಹಲವು ಆಪ್ತ ಸ್ನೇಹಿತರನ್ನು ಹೊಂದಿದ್ದಾರೆ. ಹರ್ಷಿಕಾಗೆ ಶುಭಕೋರಲು ಸ್ಯಾಂಡಲ್ವುಡ್ ಮಂದಿಯೇ ಗುಂಪು ಗುಂಪಾಗಿ ಆಗಮಿಸಿದ್ದರು. ಎಲ್ಲರೂ ನಟಿಯ ಬೇಬಿ ಶವರ್ ಪಾರ್ಟಿಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು.