ನವದೆಹಲಿ : ಮಿನಿ ಮಹಾಸಮರ ಎಂದೇ ಬಿಂಬಿತವಾಗಿರುವ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ನಿಗದಿ ಮಾಡಿದೆ.
288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದ ಮತದಾನ ನಡೆದರೆ, 81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‍ನಲ್ಲಿ ನವೆಂಬರ್ 13 ಮತ್ತು 21ರಂದು ಎರಡು ಹಂತದ ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತಿ ಜಾರಿಯಾಗಿದ್ದು, ಮತದಾರರಿಗೆ ಅಮಿಷವೊಡ್ಡುವ ಯಾವುದೇ ರೀತಿಯ ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಆಯೋಗ ಎಲ್ಲಾ ರಾಜಕಿಯ ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದೆ.ಅಕ್ಟೋಬರ್ 22ರಂದು ಅಧಿಸೂಚನೆ ಹೊರಬೀಳಲಿದೆ.
ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮೊದಲ ಹಂತದಲ್ಲಿ ಜಾರ್ಖಂಡ್‍ನಲ್ಲಿ ಅಕ್ಟೋಬರ್ 18ರಂದು ಅಧಿಸೂಚನೆ ಹೊರಬೀಳಲಿದೆ, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ.
ಎರಡನೇ ಹಂತದಲ್ಲಿ ಅಕ್ಟೋಬರ್ 22ಕ್ಕೆ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 29 ಕೊನೆಯ ದಿನಾಂಕವಾಗಿರಲಿದೆ, ಅಕ್ಟೋಬರ್ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರಲಿದೆ.

