ನವದೆಹಲಿ: ಇನ್ನು ಮುಂದೆ 4 ತಿಂಗಳು ಮುಂಚಿತವಾಗಿ ರೈಲ್ವೇ ಟಿಕೆಟ್ ಬುಕ್ ಮಾಡಲು ಸಾಧ್ಯವಿಲ್ಲ. ಭಾರತೀಯ ರೈಲ್ವೇ ಬುಕ್ಕಿಂಗ್‌ಗಾಗಿ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿದೆ. ಹೊಸ ಬದಲಾವಣೆ ನ.1 ರಿಂದ ಜಾರಿಯಾಗಲಿದೆ. ಅಕ್ಟೋಬರ್ 31 ರ ಮೊದಲು 120 ದಿನಗಳ ಬುಕ್ಕಿಂಗ್ ಮಾನ್ಯವಾಗಿರುತ್ತದೆ ಎಂದು ರೈಲ್ವೇ ಸ್ಪಷ್ಟಪಡಿಸಿದೆ.
ಅಧಿಕೃತ ಟಿಕೆಟ್ ಬುಕಿಂಗ್ ಪಾಲುದಾರ IRCTC ಜೊತೆಗೆ, ಮೇಕ್‌ಮೈಟ್ರಿಪ್, ಪೇಟಿಎಂ ಮತ್ತು ರೈಲ್ ಯಾತ್ರಿ ಮುಂತಾದ ಥರ್ಡ್-ಪಾರ್ಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಬಹುದು.
ಅಧಿಕೃತ ಸೂಚನೆಯ ಪ್ರಕಾರ, ಪರಿಷ್ಕೃತ ಬದಲಾವಣೆಗಳು ವಿಭಿನ್ನ ಮುಂಗಡ ಕಾಯ್ದಿರಿಸುವಿಕೆಯ ಮಿತಿಗಳನ್ನು ಹೊಂದಿರುವ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ ಎಕ್ಸ್‌ಪ್ರೆಸ್‌ನಂತಹ ಕೆಲವು ಹಗಲಿನ ಎಕ್ಸ್‌ಪ್ರೆಸ್ ರೈಲುಗಳಿಗೆ ಅನ್ವಯಿಸುವುದಿಲ್ಲ.

