ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿದ್ದು ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯ ಮೇಲೆ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಕೇಸು ದಾಖಲು ಮಾಡಲಾಗಿದೆ.
ವರದಿಯಲ್ಲಿರುವಂತೆ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಜಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ..
ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಕೂಡಲೇ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಇದೇ ವಿಚಾರವಾಗಿ ಪುನೀತ್ ಕೆರೆಹಳ್ಳಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಿಸಲಾಗಿದೆ.

