ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್ ನೀಡಿದ್ದು, ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆಹಾಜರಾಗುವಂತೆ ಸೂಚಿಸಿದೆ.
ಇ.ಡಿ ದಾಳಿಯ ನಂತರ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಸಂಬಂಧ ತನಿಖೆ ನಡೆಸುವಂತೆ ಇ.ಡಿ ಸೂಚನೆ ನೀಡಿತ್ತು. ಈ ಬಗ್ಗೆ ಕಳೆದೆರಡು ವರ್ಷಗಳಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.
ಇದರೊಂದಿಗೆ ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಮೀರ್ ಅವರಿಗೆ ಮತ್ತೆ ಪೊಲೀಸರ ತನಿಖೆ ಸಂಕಷ್ಟ ಮುಂದುವರಿದಿದ್ದು, ತಮ ಹಣಕಾಸು ವ್ಯವಹಾರದ ಕುರಿತು ಲೆಕ್ಕವನ್ನು ಲೋಕಾಯುಕ್ತಕ್ಕೆ ಸಚಿವರು ಸಲ್ಲಿಸಬೇಕಿದೆ. ತಮ್ಮ ಮೇಲಿನ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ವಿಚಾರಣೆಗೆ ಪೂರಕ ದಾಖಲೆ ಸಮೇತ ಬರಲು ಸಚಿವರಿಗೆ ಕಾಲಾವಕಾಶ ನೀಡಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಶಾಸಕ ಜಮೀರ್ ಅಹದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇನಲ್ಲಿ ಎಫ್‌ಐಆರ್ ದಾಖಲಿಸಿತ್ತು. ಇದನ್ನು ರದ್ದುಪಡಿಸುವಂತೆ ಜಮೀರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

