By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿವಾದಿತ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿಯವರನ್ನು ಭೇಟಿಯಾದ ಬಿಜೆಪಿ ನಾಯಕರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿವಾದಿತ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿಯವರನ್ನು ಭೇಟಿಯಾದ ಬಿಜೆಪಿ ನಾಯಕರು

BlogLatestMain Postರಾಜ್ಯ-Karnataka

ವಿವಾದಿತ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿಯವರನ್ನು ಭೇಟಿಯಾದ ಬಿಜೆಪಿ ನಾಯಕರು

BJP Leaders meet Chandrashekarnath Swamiji

Published December 2, 2024
Share
2 Min Read
Chandrashekhara NAtha Swamiji
SHARE

ಬೆಂಗಳೂರು: ಬೆಗಳೂರಿನ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಬಿಜೆಪಿ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ನಾಯಕರು, ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರ್ಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ರಾಜ್ಯ ಸರ್ಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ, ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಆರೋಪಿಸಿದ ಅವರು, ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ. ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.

ಕರಿಯ ಎಂದವರ ಬಗ್ಗೆ ಎಫ್‍ಐಆರ್ ಆಗಿದೆಯೇ? ಎಂದು ಪ್ರಶ್ನಿಸಿದ ಅವರು, ವಕ್ಫ್ ವಿಚಾರದಲ್ಲಿ ರೈತರಿಗೆ ಆಗಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಅವತ್ತು ಒಂದು ಮಾತನ್ನಾಡಿದ್ದರು. ಅದಕ್ಕೆ ಅವರು ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಿದ್ದಾರೆ. ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ ಮೇಲೆ ಇನ್ನೇನಿದೆ ಎಂದು ಪ್ರಶ್ನಿಸಿದರು.

ನಿಮ್ಮ ಪಕ್ಕದಲ್ಲೇ ನಿಂತು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ. ಮಾಡಿದ ತಪ್ಪಿಗೆ ಆಕ್ರೋಶ ವ್ಯಕ್ತವಾದಾಗ, ಕ್ಷಮೆ ಕೇಳಿದ ಮೇಲೂ ಕ್ರಮ ಜರುಗಿಸುವುದಾದರೆ ದ್ವಿಮುಖ ನೀತಿ ನಿಮ್ಮದಲ್ಲವೇ? ಓಲೈಕೆ ನೀತಿ ಮೂಲಕ ಹಿಂದೂಗಳು, ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆರೋಪಿಸಿದ ಅವರು, ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ. ಸರ್ಕಾರದ ಅನ್ಯಾಯಗಳ ವಿಷಯವನ್ನು ಜನರಿಗೆ ಎತ್ತಿ ತೋರಿಸುವ ಕೆಲಸವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿ, ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರ್ಕಾರ ಯಾಕೆ ಕೇಸು ಹಾಕಿಲ್ಲ? ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ? ಕಾನೂನು ಬೇರೆ ಬೇರೆ ಇದೆಯೇ ಎಂದು ಪ್ರಶ್ನಿಸಿದರು. ಸ್ವಾಮೀಜಿಯವರಿಗೆ 80 ವರ್ಷವಾಗಿದ್ದು, ಅನಾರೋಗ್ಯದಿಂದಿದ್ದಾರೆ. ಬಹಳ ನೊಂದಿದ್ದಾರೆ. ದೇಶದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು ಎಂದು ಹೇಳಿದರು.

ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದರು. ಇದರ ನಡುವೆ ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ತಿಳಿಸಲಾಗಿತ್ತು.

You Might Also Like

ನಾಲ್ವರು ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಬೆಂಗಳೂರಿನ ಪೊಲೀಸ್ ಆಯುಕ್ತರ ಆದೇಶ

ಬೆಂಗಳೂರಲ್ಲಿ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ, 115 ಯುವಕ-ಯುವತಿಯರು ವಶಕ್ಕೆ

ಗಂಟೆಗೂ ಹೆಚ್ಚು ಕಾಲ ನಿಂತು ಮತ ಚಲಾಯಿಸಿದ ಗೋಲ್ಡನ್ ಕ್ವೀನ್ ದಂಪತಿ

ಕೊಲೆ ಪ್ರಕರಣದಲ್ಲಿ ಶಾಸಕರ ಕಾರು ಚಾಲಕ ಅರೆಸ್ಟ್

ಬಿಗ್ ಬಾಸ್​ಗೆ ಕಿಚ್ಚ ಸುದೀಪ್ ವಿದಾಯ, ಮತ್ತೊಮ್ಮೆ ಖಚಿತಪಡಿಸಿದ ನಟ

TAGGED:BJP LeadersChandrashekarnath Swamiji
Share This Article
Facebook Copy Link Print
Previous Article Chikkamagaluru 60 ಅಡಿ ಆಳದ ಬಾವಿಗೆ ಬಿದ್ದು ಬದುಕಿ ಬಂದ 94 ವರ್ಷದ ವೃದ್ಧೆ
Next Article Avadh Oja Sir ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕೋಚಿಂಗ್ ನೀಡುತ್ತಿದ್ದ ಅವಧ್ ‘ಓಜಾ ಸರ್’ ಎಎಪಿ ಸೇರ್ಪಡೆ.
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up