By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಂಡುಕೋರರ ವಶವಾದ ಸಿರಿಯಾ ರಾಜಧಾನಿ ಡಮಾಸ್ಕಸ್, ದೇಶತೊರೆದ ಅಧ್ಯಕ್ಷ ಅಸ್ಸಾದ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಂಡುಕೋರರ ವಶವಾದ ಸಿರಿಯಾ ರಾಜಧಾನಿ ಡಮಾಸ್ಕಸ್, ದೇಶತೊರೆದ ಅಧ್ಯಕ್ಷ ಅಸ್ಸಾದ್

Blogವಿದೇಶ-International

ಬಂಡುಕೋರರ ವಶವಾದ ಸಿರಿಯಾ ರಾಜಧಾನಿ ಡಮಾಸ್ಕಸ್, ದೇಶತೊರೆದ ಅಧ್ಯಕ್ಷ ಅಸ್ಸಾದ್

Assad flees Damascus, say senior army officers; Syrian rebels take capital

Published December 8, 2024
Share
2 Min Read
Syrian rebels
SHARE

ಸಿರಿಯಾ : ಸಿರಿಯಾದ ಬಂಡುಕೋರರ ಪಡೆಗಳು ಸರ್ಕಾರದ ವಿರುದ್ಧ ಸಮರ ಸಾರಿವೆ. ಕಳೆದ ಒಂದು ವಾರದಿಂದ ನಿರಂತರ ದಾಳಿಗಳು ನಡೆಯುತ್ತಿದ್ದು, ಅಂತಿಮವಾಗಿ ಬಂಡುಕೋರರು ಸಿರಿಯಾ ರಾಜಧಾನಿ ಡಮಾಸ್ಕಸ್​ ಅನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನವೇ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ದೇಶದಿಂದ ಪಲಾಯನ ಮಾಡಿದ್ದಾರೆ.

ಕಳೆದ 24 ವರ್ಷಗಳ ಕಾಲ ದೇಶವನ್ನು ಆಳಿದ ಅಸ್ಸಾದ್, ಅಜ್ಞಾತ ಸ್ಥಳಕ್ಕೆ ವಿಮಾನದ ಮೂಲಕ ತೆರಳಿದ್ದಾರೆ ಎಂದು ಸಿರಿಯಾ ಮಿಲಿಟರಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಅಸ್ಸಾದ್ ಅವರ ಆಡಳಿತ ಪತನವಾಗಿದೆ ಎಂದು ಸೇನಾ ಕಮಾಂಡ್, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ನಿರಂಕುಶಾಧಿಕಾರಿ ಬಶರ್ ಅಲ್-ಅಸ್ಸಾದ್ ದೇಶದಿಂದಲೇ ಪಲಾಯನ ಮಾಡಿದ್ದಾನೆ. ನಾವು ರಾಜಧಾನಿ ಡಮಾಸ್ಕಸ್ ಅನ್ನು ನಿರಂಕುಶಾಧಿಕಾರಿ ಬಶರ್ ಅಲ್-ಅಸ್ಸಾದ್​ನಿಂದ ಮುಕ್ತಗೊಳಿಸಿದ್ದೇವೆ ಎಂದು ಬಂಡುಕೋರರು ಘೋಷಿಸಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ.

ನಾವು ಇಂದು 8-12–2024 ಈ ಕರಾಳ ಯುಗದ ಅಂತ್ಯ ಮತ್ತು ಸಿರಿಯಾದ ಹೊಸ ಯುಗದ ಆರಂಭವನ್ನು ಘೋಷಿಸುತ್ತೇವೆ ಎಂದು ಹಯಾತ್ ತಹ್ರೀರ್ ಅಲ್-ಶಾಮ್ ಬಂಡಾಯ ಬಣವು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದರ ಬೆನ್ನಲ್ಲೇ ಯಾವುದೇ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಸಿದ್ಧವಾಗಿದೆ ಎಂದು ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಅಲ್-ಜಲಾಲಿ ಹೇಳಿದ್ದಾರೆ.

ಸದ್ಯ ರಾಜಧಾನಿ ಡಮಾಸ್ಕಸ್​ನಲ್ಲಿ ಭೀತಿ ಆವರಿಸಿದ್ದು, ನಗರದಲ್ಲಿ ನಿರಂತರ ಗುಂಡಿನ ದಾಳಿ ನಡೆಯುತ್ತಿರುವುದಾಗಿ ಸ್ಥಳೀಯ ನಿವಾಸಿಗಳು ವಿವರಿಸಿದ್ದಾರೆ. ಇನ್ನು ಅಸ್ಸಾದ್ ಸರ್ಕಾರದ ಪತನವಾದ ಬೆನ್ನಲ್ಲೇ ಅಸ್ಸಾದ್​ ನಿಷ್ಠಾವಂತರು ದೇಶದಿಂದ ಪಲಾಯನ ಮಾಡುತ್ತಿದ್ದಾರೆ.

ರಷ್ಯಾ ಮತ್ತು ಇರಾನ್ ಬೆಂಬಲಿತ ಬಶರ್ ಅಲ್-ಅಸ್ಸಾದ್ ಆಡಳಿತವು ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಬಂಡಾಯ ಗುಂಪುಗಳಿಂದ ಮೂಲೆಗುಂಪಾಗಿದೆ. ಈ ಗುಂಪುಗಳನ್ನು ಟರ್ಕಿ ಬೆಂಬಲಿಸುತ್ತದೆ. ಅಧ್ಯಕ್ಷ ಬಸರ್ ಅಲ್-ಅಸ್ಸಾದ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನದಲ್ಲಿ ಬಂಡುಕೋರ ಪಡೆಗಳು ಕಳೆದ ವಾರ ಸಿರಿಯಾದಾದ್ಯಂತ ದಾಳಿಗಳನ್ನು ಪ್ರಾರಂಭಿಸಿದವು. 2011ರ ಅಂತರ್​ಯುದ್ಧದ ನಂತರ ಸಿರಿಯಾದಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಕಳೆದ ಐದು ದಶಕಗಳಿಂದ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಸರ್ಕಾರ ಅಧಿಕಾರದಲ್ಲಿತ್ತು. ಇದೀಗ ಮೊದಲ ಬಾರಿಗೆ ಅವರ ಸರ್ಕಾರ ಪತನವಾಗಿದೆ.

ಜಾಗತಿಕವಾಗಿ ಹೆಚ್ಚಾಗುತ್ತಿರುವ ಸಂಘರ್ಷಗಳು ಮಾನವ ಕುಲವನ್ನು ಅಪಾಯಕ್ಕೆ ದೂಡುತ್ತಿದೆ. ಈಗಾಗಲೇ ರಷ್ಯಾ-ಯೂಕ್ರೇನ್ ಹಾಗೂ ಇಸ್ರೇಲ್​-ಪ್ಯಾಲೇಸ್ತೀನ್​ ಯುದ್ಧದಿಂದ ಜನರು ನಲುಗಿ ಹೋಗಿದ್ದಾರೆ. ಅಲ್ಲದೆ, ಅಫ್ಘಾನಿಸ್ತಾನದ ಮೇಲೆ ತಾಲಿಬಾನ್​ ಉಗ್ರರ ಅಟ್ಟಹಾಸದಿಂದ ಹೆಣ್ಣು ಮಕ್ಕಳು ನರಕಯಾತನೆ ಅನುಭವಿಸುತ್ತಿದ್ದಾರೆ. ಇದರ ನಡುವೆ ಇದೀಗ ಮತ್ತೊಂದು ದೇಶದಲ್ಲಿ ಸಂಘರ್ಷ ಉಲ್ಬಣಗೊಂಡಿದೆ.

You Might Also Like

ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಟೂರ್ ಪ್ಯಾಕೇಜ್

ವಕ್ಫ್ ವಿಚಾರ ಮುಂದಿಟ್ಟುಕೊಂಡು ರೈತನ ಹೆಸರಲ್ಲಿ ಬಿಜೆಪಿ ರಾಜಕೀಯ : ಪ್ರಿಯಾಂಕ್ ಖರ್ಗೆ

ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್

ಸಂವಿಧಾನಕ್ಕೆ 75 ವರ್ಷ : ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ, ಇಲ್ಲಿದೆ ಹೈಲೈಟ್ಸ್

ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

TAGGED:Bashar al-AssadDamascusSyria
Share This Article
Facebook Copy Link Print
Previous Article Criminal Bannanje's associate, Ismail dies of illness ಪಾತಕಿ ಬನ್ನಂಜೆ ಸಹಚರ, ಇಸ್ಮಾಯಿಲ್ ಅನಾರೋಗ್ಯದಿಂದ ಸಾವು
Next Article Siddaramaiah ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up