ಪುಷ್ಪ-2 ಚಿತ್ರದ ಸಕ್ಸಸ್ ಸಂಭ್ರಮದಲ್ಲಿದ್ದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ಗೆ ಬಿಗ್ ಶಾಕ್ ಆಗಿದೆ. ಹೈದ್ರಾಬಾದ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.
ಅಲ್ಲು ಅರ್ಜುನ್ ಮೂವಿ ಪುಷ್ಪ 2 ಸಕ್ಸಸ್ಫುಲ್ ಆಗಿ ರನ್ ಆಗುತ್ತಿರುವ ಸಂದರ್ಭದಲ್ಲಿಯೇ ನಟ ಅರೆಸ್ಟ್ ಆಗಿದ್ದು ಅವರ ಅಭಿಮಾನಿಗಳಿಗೂ ಇಂಡಸ್ಟ್ರಿಗೂ ಶಾಕ್ ಆಗಿದೆ.
ನಟ ಅಲ್ಲು ಅರ್ಜುನ್ ಅವರು ಇತ್ತೀಚೆಗೆ ತಮ್ಮ ವಿರುದ್ಧ ದಾಖಲಾದ ಕೇಸ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಸಂಧ್ಯ ಥಿಯೇಟರ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿತ್ತು. ಅದರ ಬೆನ್ನಲ್ಲಿಯೇ ನಟ ತಮ್ಮ ವಿರುದ್ಧ ದಾಖಲಾದ ಕೇಸ್ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.
BNS ಕಾಯಿದೆಯ U/s 105 ಮತ್ತು 118(1) ಹಾಗೂ r/w 3(5)ರಡಿ ಪ್ರಕರಣ ದಾಖಲಾಗಿದೆ. ನಟ ಅಲ್ಲು ಅರ್ಜುನ್.. ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್.. ಅಲ್ಲು ಅರ್ಜುನ್ ಅವರ ಭದ್ರತಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ನೂಕುನುಗ್ಗಲು ಘಟನೆಗೆ ಥಿಯೇಟರ್ ಆಡಳಿತವೇ ಹೊಣೆ ಎಂಬ ಆರೋಪ ಇದೆ.