By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಅಟ್ಯಾಕ್..! ಘಟನೆ ಹಿಂದಿರುವ ರಾಜಕೀಯ ಏನು..?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಅಟ್ಯಾಕ್..! ಘಟನೆ ಹಿಂದಿರುವ ರಾಜಕೀಯ ಏನು..?
BlogLatestMain PostTop Storiesರಾಜಕೀಯ | Politicsರಾಜ್ಯ-Karnataka

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಅಟ್ಯಾಕ್..! ಘಟನೆ ಹಿಂದಿರುವ ರಾಜಕೀಯ ಏನು..?

Egg Attack on BJP MLA Munirathna

Published December 25, 2024
Share
3 Min Read
SHARE

ಬೆಂಗಳೂರು : ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಂದಿನಿ ಲೇಔಟ್ ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೊಟ್ಟೆ ದಾಳಿ ಹಿನ್ನೆಲೆಯಲ್ಲಿ ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

https://www.facebook.com/share/v/sszA4wwF8ELP8nqd/?mibextid=wwXIfr

ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ.

ಈ ವೇಳೆ ಕಾಂಗ್ರೆಸ್ ಬೆಂಬಲಿಗರು ಕೂಡಾ ಪ್ರತಿಭಟನೆ ನಡೆಸಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕಾರು ಜಖಂಗೊಳಿಸಿರುವ ಆರೋಪವೂ ಕೇಳಿಬಂದಿದೆ. ಪ್ರತಿಭಟನೆ ವೇಳೆಯಲ್ಲಿ 2-3 ಕಾರುಗಳ ಜಖಂಗೊಂಡಿದ್ದು, ಕೆಲ ಮಂದಿಗೆ ಹಲ್ಲೆಯಾಗಿದೆ ಎನ್ನಲಾಗಿದೆ.

ಮೊಟ್ಟೆಯಲ್ಲಿ ಕೆಮಿಕಲ್‌ ಮಾದರಿಯ ಪದಾರ್ಥ :
ಮುನಿರತ್ನ ಆರೋಗ್ಯ ವಿಚಾರಿಸಲು ಬಿಜೆಪಿ ನಾಯಕರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಸಂಸದ ಡಾ ಮಂಜುನಾಥ್ ಸಹ ಆಸ್ಪತ್ರೆಗೆ ಭೇಟಿ ನೀಡಿ ಮುನಿರತ್ನ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಮುನಿರತ್ನ ನಾಯ್ಡು ತಲೆ ಹಿಂಭಾಗಕ್ಕೆ ಪೆಟ್ಟು ಬಿದ್ದಿದೆ. ಕೆಮಿಕಲ್‌ ಮಾದರಿಯ ಪದಾರ್ಥದಿಂದ ಅವರಿಗೆ ಹೊಡೆದಿದ್ದಾರೆ. ಇದರಿಂದ ತಲೆ ಸುತ್ತು, ವಾಂತಿ ಬಂದಂತೆ ಆಗುತ್ತಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಮೊಟ್ಟೆ ದಾಳಿಯಿಂದ ಮುನಿರತ್ನ ಕೂದಲು ಸ್ವಲ್ಪ ಬರ್ನ್ ಆಗಿದೆ. ಹಲವು ತಿಂಗಳಿಂದ ಕೆಲವು ರಾಜಕೀಯ ಘಟನೆಗಳನ್ನು ನೋಡಿದ್ರೆ ಮುನಿರತ್ನ ನಾಯ್ಡುಗೆ ಟಾರ್ಗೆಟ್ ಮಾಡುತ್ತಿದ್ದಂತೆ ಕಾಣುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದರು.

ಘಟನೆ ಖಂಡಿಸಿದ ಬಿಜೆಪಿ ನಾಯಕರು :
ಕಾನೂನು ಕೈಗೆ ತೆಗೆದುಕೊಳ್ಳುವುದು ನಿಮ್ಮಂಥವರಿಗೆ ಶೋಭೆ ತರುವುದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೇಳಬಯಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರು ಘಟನೆಯನ್ನು ಖಂಡಿಸಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಮೇಲೆ ಆರೋಪಗಳಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳುತ್ತಿದೆ. ಕೋರ್ಟ್ ಜಾಮೀನು ಕೊಟ್ಟಿದೆ. ಆದರೆ, ಅವರ ಕ್ಷೇತ್ರಕ್ಕೆ ಹೋಗಬಾರದೆಂದು ಹೇಳಿದೆಯೇ ಎಂದು ಪ್ರಶ್ನಿಸಿದರು.

ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಪೂರ್ವಜರಾದ ಇಂದಿರಾ ಗಾಂಧಿ, ಸಂಜಯ್ ಗಾಂಧಿ ಥರದ ಕೆಲ ವ್ಯಕ್ತಿಗಳಂತೆ ಮಾಡುವುದು ಸರಿಯಲ್ಲ. ನೀವು ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವುದು, ಮೊಟ್ಟೆ ಎಸೆಯುವುದು ಖಂಡನೀಯ. ಇವತ್ತಿಗೂ ಸಿ.ಟಿ. ರವಿಯವರ ದೂರು ಆಧರಿಸಿ ಎಫ್‍ಐಆರ್ ದಾಖಲಿಸಿಲ್ಲ; ಸ್ವಯಂಪ್ರೇರಿತ ಆಗಿದೆ ಎನ್ನುತ್ತಾರೆ ಎಂದು ಜೋಶಿ ಹರಿಹಾಯ್ದರು.

ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಹುನ್ನಾರ :
ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್‌, ಡಿಕೆ ಶಿವಕುಮಾರ್‌ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್‌ ದಾಳಿ ನಡೆದಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್‌ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆ ಇದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.

ಇದು ಕಾಂಗ್ರೆಸ್ ಪ್ರೇರಿತ ಕೃತ್ಯವಾಗಿದ್ದು ಡಿಕೆ ಸುರೇಶ್, ಡಿಕೆ ಶಿವಕುಮಾರ್‌, ಕುಸುಮ ತಂದೆ ಹನುಮಂತರಾಯಪ್ಪ ಇದಕ್ಕೆ ನೇರ ಹೊಣೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕಲವರು ಮನೆಯ ಮುಂದೆಯೇ ಬಂದು ರಾಜೀನಾಮೆ ಕೊಡಿ. ಇಲ್ಲದೇ ಇದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ತಿಳಿಸಿದರು.

You Might Also Like

ಇಂದಿನ TOP 10 ಸುದ್ದಿಗಳು (24-06-2025)

ಅಶ್ವಿನಿ ವೈಷ್ಣವ್ ಭೇಟಿಯಾದ ಹೆಚ್ಡಿಕೆ, ಬೆಂಗಳೂರು-ಪುಣೆ ನಡುವೆ 4ನೇ ಹೈ ಸ್ಪೀಡ್ ರೈಲ್ವೆ ಕಾರಿಡಾರ್

ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

2025-26ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ,ಇಲ್ಲಿದೆ ಲಿಸ್ಟ್

‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

TAGGED:Egg AttackEgg PeltingMLA Munirathna
Share This Article
Facebook Copy Link Print
Previous Article Suicide Hang ಕೋಲಾರ : ಇಬ್ಬರು ಮಕ್ಕಳ ಕೊಂದು ತ್ಮಹತ್ಯೆಗೆ ಶರಣಾದ ತಾಯಿ
Next Article Retro “ರೆಟ್ರೋ” ಅವತಾರವೆತ್ತಿದ ‘ಕಂಗುವ’ ಸೂರ್ಯ, ಟೈಟಲ್ ಟೀಸರ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up