ಉಡುಪಿ : ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಹೆಜಮಾಡಿಯ ಅಮಾಸಕರಿಯ ಬಳಿ ನಡೆದಿದೆ. ಸಮುದ್ರಕ್ಕೆ ಈಜಲು ತೆರಳಿದ್ದ 6 ಜನರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ. ಇಂದು(ಸೋಮವಾರ) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮಾವಾಸ್ಯೆಯ ದಿನವಾದ್ದರಿಂದ ಸಮುದ್ರಕ್ಕೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇನ್ನೂ ನಾಲ್ಕು ಯುವಕರನ್ನು ನೀರಿನಿಂದ ರಕ್ಷಿಸಲಾಗಿದೆ. ಸಮುದ್ರದಲ್ಲಿ ಮುಳುಗಿದ ಇಬ್ಬರ ಜೀವ ಉಳಿಸಲು ಸ್ಥಳೀಯರಿಗೆ ಸಾಧ್ಯವಾಗಲಿಲ್ಲ.

