ಚಾಮರಾಜನಗರ: ಕ್ಷುಲ್ಲಕ ಕಾರಣ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನು ಚಾಕುವಿನಿಂದ ಇರಿದು ಕೊಲೆಗೈದು ತಂದೆ, ಅತ್ತಿಗೆ ಮೇಲೂ ಚಾಕುವಿನಿಂದ ದಾಳಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ರಾತ್ರಿ ನಡೆದಿದೆ. ಇಲ್ಲಿನ ನಿವಾಸಿ ಸೈಯದ್ ಎಂಬವರ ಪುತ್ರಿ ಐಮಾನ್ ಬಾನು(26) ಕೊಲೆಯಾದವರು.
ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಸೈಯದ್(60) ಮತ್ತು ತಸ್ಲಿಮಾ ತಾಜ್(25) ಗಂಭೀರವಾಗಿ ಗಾಯಗೊಂಡು ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಫರ್ಮಾನ್ ತನ್ನ ಅಣ್ಣನ ಮಗಳಿಗೆ ಸೌತೆಕಾಯಿ ತಿನ್ನಿಸುತ್ತಿದ್ದಾಗ ಸಹೋದರಿ ಐಮಾನ್ ಬಾನು, ಜ್ವರ ಬಂದಿರುವ ಮಗುವಿಗೆ ಸೌತೆಕಾಯಿ ಏಕೆ ತಿನ್ನಿಸುತ್ತಿದ್ದಿಯಾ ಎಂದು ಪ್ರಶ್ನಿಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಐಮಾನ್ ಅವರಿಗೆ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾನೆ. ಬಳಿಕ, ತಂದೆ ಸೈಯದ್ ಮತ್ತು ಅತ್ತಿಗೆಗೂ ಇರಿದಿದ್ದಾನೆ. ಗಲಾಟೆಯಲ್ಲಿ ಸೈಯದ್ ಅವರ ಕೈ ಕೂಡಾ ಮುರಿದಿದೆ. ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

