ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತುಮಕೂರಿನ ಮಧುಗಿರಿ ಡಿವೈಎಸ್‌ಪಿಯನ್ನು ಅಮಾನತು ಮಾಡಲಾಗಿದೆ.
ಜಮೀನು ವ್ಯಾಜ್ಯದ ಬಗ್ಗೆ ಮಹಿಳೆಯೊಬ್ಬರು ದೂರು ನೀಡಲು ಠಾಣೆಗೆ ಆಗಮಿಸಿದ್ದರು. ಈ ವೇಳೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಮಹಿಳೆಯನ್ನು ವಿಶ್ರಾಂತಿ ಕೊಠಡಿಗೆ ಕರೆದೊಯ್ದು, ಅಲ್ಲಿ ಅನೈತಿಕ ಚಟುವಟಿಕೆ ನಡೆಸಿದ್ದಾರೆ.
ಡಿವೈಎಸ್‌ಪಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಕಿಟಕಿಯಿಂದ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ಘಟನೆ ಬೆಳಕಿಗೆ ಬರುತ್ತಲೇ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ. ಡಿವೈಎಸ್‌ಪಿ ನಡೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

