ಕನ್ನಡ ಚಿತ್ರರಂಗವನ್ನೇ ತಿರುಗಿ ನೋಡುವಂತೆ ಮಾಡಿ ಖ್ಯಾತಿ ಪಸರಿಸಿದ ಜನಪ್ರಿಯ ನಟ, ಕಲಾಭಿಮಾನಿಗಳ ನೆಚ್ಚಿನ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಇಂದು 39ನೇ ಹುಟ್ಟುಹಬ್ಬದ ಸಂಭ್ರಮ . ಈ ಬರೀ ಹುಟ್ಟುಹಬ್ಬವನ್ನು ಆಚರಿಸದೇ ಅಭಿಮಾನಿಗಳಿಗೆ ಸೆರ್ಪ್ರೈಸ್ ಕೊಟ್ಟಿದ್ದಾರೆ.ಬರ್ತ್ಡೇ ಟ್ರೀಟ್ ಎನ್ನುವಂತೆ ಟಾಕ್ಸಿಕ್ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಿದ್ದಾರೆ .
‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ. ಯಶ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಯಶ್ ಅವರು ರೆಟ್ರೋ ಕಾರಲ್ಲಿ ಸ್ಟೈಲಿಶ್ ಆಗಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಒಳಗೆ ಬರುತ್ತಿರುವಾಗ ಅಲ್ಲಿ ಎಲ್ಲರೂ ಮೋಜಿನಲ್ಲಿ ತೇಲುತ್ತಾ ಇರುತ್ತಾರೆ. ಆಗ ಯಶ್ ಅವರು ಹೆಂಡದ ಬಾಟಲಿ ತೆಗೆದುಕೊಂಡು ಅಲ್ಲಿದ್ದ ಮಹಿಳೆಯ ಮೇಲೆ ಸುರಿಯುತ್ತಾರೆ. ಮೇಕಿಂಗ್ ನೋಡಿದರೆ ಇದು ರೆಟ್ರೋ ಕಥೆಯ ರೀತಿ ಕಾಣುತ್ತದೆ.
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ವೆಂಕಟ್ ನಾರಾಯಣ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಬಿಗ್ ಬಜೆಟ್ನಲ್ಲಿ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಇದನ್ನು, ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡಲು ಆಲೋಚನೆ ನಡೆದಿದೆ. ಈ ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು ಕೂಡ ಕೆಲಸ ಮಾಡುತ್ತಿದ್ದಾರೆ.










