ಬೆಳಗಾವಿ : ಬಿಜೆಪಿ ಶಾಸಕ ಅಭಯ ಪಾಟೀಲ ಬಂಧನ ಮಾಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ. ಬೆಳಗಾವಿ ಚೆನ್ನಮ್ಮ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಮೆರವಣಿಗೆ.
ನಾಡದ್ರೋಹಿ ಕೆಲಸ ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ. ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ. ಛತ್ರಪತಿ ಸಂಭಾಜೀ ಮಹಾರಾಜರ ಪುತ್ಥಳಿ ಅನಾವರಣ ಸಂದರ್ಭದಲ್ಲಿ ನಾಡದ್ರೋಹಿ ಘೋಷಣೆ.
ಬಿಜೆಪಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ನಡೆದಿದ್ದ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ. ಶಾಸಕರ ನಿರ್ಲಕ್ಷ್ಯದಿಂದಾಗಿ ಬೆಳಗಾವಿಯಲ್ಲಿ ನಾಡದ್ರೋಹಿ ಘೋಷಣೆ ಕೂಗಲಾಗಿದೆ.
ಅದಕ್ಕಾಗಿ ಬಿಜೆಪಿ ಶಾಸಕ ಅಭಯ ಪಾಟೀಲ ಮೇಲೆ ದೂರು ನೀಡಲಾಗಿದೆ.
ಬಿಜೆಪಿ ಶಾಸಕ ಅಭಯ ಪಾಟೀಲ ಅವರನ್ನು ಬಂಧನ ಮಾಡುವಂತೆ ಆಗ್ರಹಿಸಿ ಪ್ರೋಟೆಸ್ಟ.
ಹಾಗೂ ನಾಡ ದ್ರೋಹಿ ಘೋಷಣೆ ಹೋಗಿಸಲು ಪ್ರಚೋದನೆ ನೀಡಿದ ಮೇಯರ್ ಹಾಗೂ ಉಪಮೇಯರ ಮಹಾನಗರ ಪಾಲಿಕೆ ಗೋಡೆ ಜಿಗಿದು ಮುತ್ತಿಗೆ ಹಾಕಲು ಯತ್ನಿಸಿದ ಕ ರ ವೇ ನಾರಾಯಣಗೌಡ ಬಣದ ಕಾರ್ಯಕರ್ತರು ವನ್ನು ಪೊಲೀಸರು ಬಂದಿಸಿದರು.
ವರದಿ : ದಯಾನಂದ. ಎಂ

