By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರಿನಲ್ಲಿ ಸಂಕ್ರಾಂತಿಗೆ ಖರೀದಿ ಭರಾಟೆ ಜೋರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಮೈಸೂರು-Mysuru - ಮೈಸೂರಿನಲ್ಲಿ ಸಂಕ್ರಾಂತಿಗೆ ಖರೀದಿ ಭರಾಟೆ ಜೋರು

ಮೈಸೂರು-Mysuruರಾಜ್ಯ-Karnataka

ಮೈಸೂರಿನಲ್ಲಿ ಸಂಕ್ರಾಂತಿಗೆ ಖರೀದಿ ಭರಾಟೆ ಜೋರು

Mysore in a rush for Sankranti

Published January 13, 2025
Share
3 Min Read
Mysore in a rush for Sankranti
SHARE

ಮೈಸೂರು, ಜ. 13: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಮೈಸೂರಿನಲ್ಲಿ ಸಿದ್ಧತೆ ಜೋರಾಗಿದ್ದು, ಹಬ್ಬಕ್ಕೆ ಬೇಕಾದಷ್ಟು ಅಗತ್ಯ ವಸ್ತುಗಳ ಖರೀದಿ ಮತ್ತು ವ್ಯಾಪಾರ ಭರಾಟೆ ಜೋರಾಗಿಯೇ ನಡೆಯುತ್ತಿದ್ದು, ಎಲ್ಲೆಡೆ ಜನಜಂಗುಳಿ ಕಂಡು ಬರುತ್ತಿದೆ.

ದಕ್ಷಿಣಾಯನದಿಂದ ಉತ್ತರಾಯಣದ ಕಡೆಗೆ ಸೂರ್ಯನ ಚಲನೆಯನ್ನು ಸಂಕ್ರಾಂತಿಯಾಗಿ ಆಚರಣೆ ಮಾಡಲಾಗುತ್ತದೆ. ಅಲ್ಲದೇ, ಈ ಸಮಯದಲ್ಲಿ ಸೂರ್ಯದೇವ ತನ್ನ ಮಗ ಶನಿಯನ್ನು ಭೇಟಿ ಮಾಡುತ್ತಾನೆ ಎನ್ನುವ ನಂಬಿಕೆ ಇದೆ. ಮಕರ ಸಂಕ್ರಾಂತಿ ದೇಶದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದ್ದು, ಈ ಹಬ್ಬವನ್ನು ವಿವಿಧೆಡೆ ಹಲವು ರೀತಿಯಲ್ಲಿ ಆಚರಿಸಲಾಗುತ್ತದೆ. ಮೈಸೂರು ಭಾಗದಲ್ಲಿ ಜನರು ಹಬ್ಬದ ದಿನದಂದು ಬೇಗನೆ ಎದ್ದು ಸ್ನಾನ ಮಾಡಿ, ಸೂರ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ.

ಮನೆ ಮುಂಭಾಗ ಚಿತ್ತಾಕರ್ಷಕ ರಂಗೋಲಿ ಬಿಡಿಸಿ ಅದಕ್ಕೆ ಬಣ್ಣ ತುಂಬುತ್ತಾರೆ. ಮನೆಗಳನ್ನು ಅಲಂಕಾರ ಮಾಡಿ ಎಳ್ಳು-ಬೆಲ್ಲ ಹಂಚಲಾಗುತ್ತದೆ. ಜಾನುವಾರುಗಳಿಗೆ ಅರಿಶಿಣ ಬಳಿದು ಪೂಜೆ ಸಲ್ಲಿಸುತ್ತಾರೆ. ಅಲ್ಲದೆ, ಎತ್ತುಗಳನ್ನು ಕಿಚ್ಚು ಹಾಯಿಸಲಾಗುತ್ತದೆ.

ಜಾನುವಾರುಗಳನ್ನು ಅಲಂಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಕಿಚ್ಚು ಹಾಯಿಸುವುದು ಮೈಸೂರು ಭಾಗದ ಸಂಕ್ರಾಂತಿಯ ವೈಶಿಷ್ಟ್ಯದಲ್ಲೊಂದಾಗಿದೆ. ಕಿಚ್ಚು ಹಾಯಿಸಿದ ಬಳಿಕ ಮನೆಗೆ ಮರಳುವ ರಾಸುಗಳಿಗೆ ಆರತಿ ಬೆಳಗಿ ಪೂಜೆ ಮಾಡಿ ಪ್ರಸಾದ ನೀಡಲಾಗುತ್ತದೆ

ಈ ಹಬ್ಬದ ಸಂಭ್ರಮದಲ್ಲಿ ಮೈಸೂರು ನಗರದ ದೇವರಾಜ ಮಾರುಕಟ್ಟೆ, ಚಿಕ್ಕ ಗಡಿಯಾರ ವೃತ್ತ, ಶಿವರಾಂ ಪೇಟೆ, ವಾಣಿವಿಲಾಸ, ಮಂಡಿ ಮಾರ್ಕೆಟ್, ಅಗ್ರಹಾರ ವೃತ್ತ, ನಂಜುಮಳಿಗೆ ವೃತ್ತ, ಜೆಕೆ ಮೈದಾನ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿರುವ ಪ್ರಮುಖ ಮಾರುಕಟ್ಟೆ, ವೃತ್ತಗಳು ಹಾಗೂ ರಸ್ತೆ ಬದಿಯಲ್ಲಿ ಹಬ್ಬಕ್ಕೆ ಬೇಕಿರುವ ಅಗತ್ಯ ವಸ್ತುಗಳ ವ್ಯಾಪಾರ ಜೋರಾಗಿ ನಡೆಯಿತು.

ನಿನ್ನೆ ಬೆಳಗ್ಗೆಯಿಂದಲೇ ಮಾರುಕಟ್ಟೆಗೆ ತಂಡೋಪಾದಿಯಲ್ಲಿ ಬಂದ ಗ್ರಾಹಕರು ಹೂ, ಹಣ್ಣು, ಕಬ್ಬು, ಎಳ್ಳು-ಬೆಲ್ಲ-ಕೊಬ್ಬರಿ, ಹೊಸ ಬಟ್ಟೆ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಲು ಮುಗಿಬಿದ್ದರು. ಸಂಕ್ರಾಂತಿಯ ಪ್ರಮುಖ ಆಕರ್ಷಣೆ ಎಳ್ಳು ಬೆಲ್ಲ ಬೀರಲು ಬೇಕಾದ ಎಳ್ಳು-ಬೆಲ್ಲ-ಕೊಬ್ಬರಿ ಮಿಕ್ಸ್ ಮತ್ತು ಕಬ್ಬಿನ ಜಲ್ಲೆಯ ವ್ಯಾಪಾರ ಹೆಚ್ಚಿನ ಪ್ರಮಾಣದಲ್ಲಿ ನಡೆಯಿತು.

ಮೈಸೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬಿನ ಜಲ್ಲೆಗಳನ್ನು ತಂದು ನಗರದ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಮಾರಾಟ ಮಾಡಿದರು. ಇತ್ತ ದೇವರಾಜ ಮಾರುಕಟ್ಟೆಯಲ್ಲಿ ಕಬ್ಬಿನ ಜಲ್ಲೆಯ ಉದ್ದ ಮತ್ತು ದಪ್ಪದ ಅನುಗುಣವಾಗಿ ಒಂದು ಜಲ್ಲೆಯ ದಿಂಡಿಗೆ 10, 20, 30 ರೂಪಾಯಿಗೆ ಮಾರಾಟವಾಯಿತು. ಇನ್ನೂ ಅಗ್ರಹಾರ ಸೇರಿದಂತೆ ಇತರೆಡೆ ಪೂರ್ಣ ಜಲ್ಲೆಗೆ 50ರಿಂದ 60 ರೂಗೆ ಮಾರಾಟವಾದ ದೃಶ್ಯಗಳು ಕಂಡುಬಂದವು.

ಇನ್ನೂ ಎಳ್ಳು-ಬೆಲ್ಲ ಮಿಕ್ಸ್ ಇರುವ ಒಂದು ಕೆಜಿಯ ಪ್ಯಾಕೆಟ್ 160-180 ರೂಪಾಯಿ ಆಗಿದೆ. ಕೆಲವರು ಎಳ್ಳು ಬೆಲ್ಲ ಮಿಕ್ಸ್ ಪ್ಯಾಕೆಟ್ ಕೊಂಡರೆ, ಬಹುತೇಕರು ಮಿಕ್ಸ್ ಬೇಕಾದ ಎಳ್ಳು, ಬೆಲ್ಲ, ಕೊಬ್ಬರಿ, ಕಡಲೆ ಬೀಜ, ಸಕ್ಕರೆ ಅಚ್ಚು, ಕಲ್ಲು ಸಕ್ಕರೆ ಅಚ್ಚು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಖರೀದಿಸುವ ದೃಶ್ಯ ಕಂಡುಬತು.

ಒಂದು ಕೆಜಿ ಎಳ್ಳಿಗೆ 280 ರೂ., ಕತ್ತರಿಸಿದ ಬೆಲ್ಲ ಕೆಜಿಗೆ 140 ರೂ., ಕಡಲೆ ಬೀಜ (ಬೆಳೆ) ಕೆಜಿಗೆ 200, ಹುಂಡೆ ಕಡಲೇ ಬೀಜ ಕೆಜಿಗೆ 180 ರೂ. ಕತ್ತರಿಸಿದ ಕೊಬ್ಬರಿ ಕೆಜಿಗೆ 250-280 ರೂ.ಗೆ ಮಾರಾಟವಾಯಿತು. ಬಣ್ಣ ಬಣ್ಣದ ಹಾಗೂ ವಿವಿಧ ಆಕೃತಿಯ ಕಲ್ಲು ಸಕ್ಕರೆ ಅಚ್ಚುಗಳು ಗ್ರಾಹಕರ ಗಮನ ಸೆಳೆದವು.

ಸಂಕ್ರಾಂತಿ ಹಬ್ಬದ ಹಿನ್ನೆಲೆ ನಗರದಲ್ಲಿ ಹೂವಿನ ಬೆಲೆ ಕೊಂಚ ಏರಿಕೆಯಾಗಿದೆ. ಸಾಮಾನ್ಯ ದಿನಕ್ಕಿಂತ 20ರಿಂದ 30ರೂ. ಏರಿಕೆಯಾಗಿದೆ. ಸೇವಂತಿಗೆ 80-100 ರೂ. ಮಲ್ಲಿಗೆ ಮೀಟರ್‌ಗೆ 150-200 ರೂ., ಕನಕಾಂಬರ 150, ಕಾಕಡ 80-100 ರೂ. ಮರಳೆ 80 ರೂ ಹಾಗೂ ಬಾಳೆ ಹಣ್ಣು ಕೆಜಿಗೆ 70-80 ರೂ.ಗೆ ಮಾರಾಟವಾಯಿತು. ತರಕಾರಿ ಮತ್ತು ಹಣ್ಣುಗಳು ಬೆಲೆಯೂ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೆಲವರು ಎಳ್ಳು ಬೆಲ್ಲದ ಜೊತೆಗೆ ಕಿತ್ತಲೆ, ಸೊಪ್ಪಿನ ಕಡಲೆಯನ್ನೂ ನೀಡುವುದರಿಂದ ಸೊಪ್ಪಿನ ಕಡಲೆಯ ಮಾರಾಟವೂ ಜೋರಾಗಿತ್ತು. ಕಿತ್ತಲೆ ಕೆಜಿಗೆ 80, ಸೌತೆಕಾಯಿ ಕೆಜಿಗೆ 40 ರೂಪಾಯಿ ಮಾರುಕಟ್ಟೆಯಲ್ಲಿ ನಿಗದಿ ಮಾಡಲಾಗಿತ್ತು. ಒಟ್ಟಾರೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಸಂಭ್ರಮಕ್ಕೆ ಮೈಸೂರು ಸಂಪೂರ್ಣ ಸಜ್ಜಾಗಿದೆ.

You Might Also Like

ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

Rain Alert : ರಾಜ್ಯದಲ್ಲಿ ಇನ್ನೊಂದು ವಾರ ಮಳೆ ಸಾಧ್ಯತೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ, ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ

ನಕಲಿ ಐವಿಆರ್‌ ಕರೆ ಸ್ವೀಕರಿಸಿ ಬರೋಬ್ಬರಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಾಹುಲ್ ಗಾಂಧಿಗೆ ಜಾಮೀನು ಮಂಜೂರು- 40% ಜಾಹೀರಾತು ಪ್ರಕರಣದಲ್ಲಿ ರಾಗಾಗೆ ರಿಲೀಫ್‌

TAGGED:MysuruSankranti
Share This Article
Facebook Copy Link Print
Previous Article Young journalist dies in horrific road accident ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತ ಸಾವು
Next Article Vehicles parked on the road, traffic police missing ರಸ್ತೆಯಲ್ಲಿ ಅಡ್ಡಾ ದಿಡ್ಡಿ ವಾಹನಗಳು, ಟ್ರಾಫಿಕ್ ಪೊಲೀಸರು ನಾಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up