ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ.
ಈ ಕುರಿತು ಭಾನುವಾರ ಜೆಡಿಎಸ್ ಪಕ್ಷದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.
ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು.
ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಗುಡುಗಿದರು.
ದಲಿತರಿಗೆ ದೇವೆಗೌಡರ ಕೊಡುಗೆ: ಹೆಚ್ ಕುಮಾರಸ್ವಾಮಿ ಹೇಳಿದ್ದೇನು..?
ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ ,ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು.
ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಬೇಕೆಂದು ಗ್ರಾಮಸ್ಥರು ಕೇಂದ್ರ ಸಚಿವರಿಗೆ ಬೇಡಿಕೆ ಮಂಡಿಸಿದರು. ಇದಕ್ಕೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ತಕ್ಷಣವೇ ಸಮುದಾಯ ಭವನ ಮಂಜೂರು ಮಾಡಿ, ನಿರ್ಮಾಣ ಮಾಡಿಕೊಡಲಾಗುವುದು. ಅದಕ್ಕೆ ಅಗತ್ಯವಾದ ಸೂಕ್ತ ಜಾಗವನ್ನು ತಕ್ಷಣವೇ ಗ್ರಾಮಸ್ಥರ ಜತೆ ಸೇರಿ ಗುರುತಿಸುವಂತೆ ಮಾಜಿ ಶಾಸಕ ಅನ್ನದಾನಿ ಅವರಿಗೆ ಸೂಚಿಸಿದರು

